ಬುಧವಾರ, ಜೂಲೈ 8, 2020
25 °C

ಸಿಐಎಸ್‌ಎಫ್‌: 11 ಸಿಬ್ಬಂದಿಗೆ ಕೋವಿಡ್‌

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ/ನವದೆಹಲಿ: ‘ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) 11 ಸಿಬ್ಬಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ’ ಎಂದು ಪನ್ವೇಲ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುವ ವೇಳೆ ಸೋಂಕು ತಗುಲಿರುವ ಶಂಕೆ ಇದೆ. ಬಳಿಕ ಇವರು ನವಿ ಮುಂಬೈನ ಖಾರ್‌ಘರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು’ ಎಂದು ಅವರು ಹೇಳಿದ್ದಾರೆ.

217 ಮಂದಿಗೆ ನೆಗೆಟಿವ್: ‘ಇಟಲಿಯಿಂದ ವಾಪಸಾಗಿ ದೆಹಲಿಯ ಐಟಿಬಿಪಿ ಕ್ವಾರಂಟೈನ್‌ ಕೇಂದ್ರದಲ್ಲಿದ್ದ 217 ಭಾರತೀಯರ ಸೋಂಕು ಪರೀಕ್ಷೆ ವರದಿ ಬಂದಿದ್ದು, ನೆಗೆಟಿವ್ ಫಲಿತಾಂಶ ಇದೆ’ ಎಂದು ಐಟಿಬಿಪಿ ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು