ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದಲ್ಲಿ ಬಂಧಿತ 129 ಭಾರತೀಯ ವಿದ್ಯಾರ್ಥಿಗಳಿಗೆ ನೆರವು: ವಿದೇಶಾಂಗ ಇಲಾಖೆ

Last Updated 2 ಫೆಬ್ರುವರಿ 2019, 7:03 IST
ಅಕ್ಷರ ಗಾತ್ರ

ನವದೆಹಲಿ: ಅಮೆರಿಕದಲ್ಲಿ ಬಂಧಿತರಾಗಿರುವ 129 ಭಾರತೀಯ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಪಡೆಯಲಾಗಿದ್ದು, ಅವರಿಗೆ ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುವುದು ಎಂದು ಭಾರತೀಯ ವಿದೇಶಾಂಗ ಇಲಾಖೆ ಹೇಳಿದೆ.

ವಲಸೆ ಅಧಿಕಾರಿಗಳು ಒಟ್ಟು130 ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಇವರಲ್ಲಿ129 ವಿದ್ಯಾರ್ಥಿಗಳು ಭಾರತೀಯರಾಗಿದ್ದಾರೆ. ಇವರು ನಕಲಿ ವಿಶ್ವವಿದ್ಯಾಲಯವೊಂದರಲ್ಲಿ ನೋಂದಣಿ ಮಾಡಿಕೊಂಡಿದ್ದರು. ಇಲ್ಲಿನ ವಲಸೆ ಅಧಿಕಾರಿಗಳು ನಡೆಸಿದ ಮಹತ್ವದಕಾರ್ಯಾಚರಣೆಯಲ್ಲಿ ಈ ದೊಡ್ಡ ಹಗರಣ ಬೆಳಕಿಗೆ ಬಂದಿದೆ.

ಬಂಧಿತ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ಹಾಗೂ ಶೀಘ್ರವಾಗಿ ವಿದ್ಯಾರ್ಥಿಗಳಿಗೆ ಭಾರತೀಯ ರಾಯಭಾರ ಕಚೇರಿಯ ಸಂಪರ್ಕ ಕಲ್ಪಿಸುವಂತೆ ಅಮೆರಿಕ ಸರ್ಕಾರಕ್ಕೆ ಭಾರತ ಮನವಿ ಮಾಡಿದೆ.

ಬಲ್ಲಮೂಲಗಳ ಪ್ರಕಾರಫರ್ಮಿಂಗ್ಟನ್ ಹಿಲ್ಸ್ ವಿಶ್ವವಿದ್ಯಾಲಯದ ಹೆಸರಿನಲ್ಲಿ ನಕಲಿ ವೀಸಾಗಳನ್ನು ಸೃಷ್ಟಿ ಮಾಡಲಾಗಿದೆ. ಇದೇ ವಿಶ್ವವಿದ್ಯಾಲಯದ ಹೆಸರಿನಲ್ಲಿ ವಿದ್ಯಾರ್ಥಿಗಳು ವೀಸಾಗಳನ್ನು ಪಡೆದಿದ್ದಾರೆ ಎನ್ನಲಾಗಿದೆ.ಈಗಾಗಲೇ ಅಮೆರಿಕ ವಲಸೆ ಅಧಿಕಾರಿಗಳು ಬಂಧಿತ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ರವಾನಿಸಿದ್ದಾರೆ.

ಸಹಾಯವಾಣಿ ತೆರೆದ ವಿದೇಶಾಂಗ ಇಲಾಖೆ

ಅಮೆರಿಕದಲ್ಲಿ ವಿದ್ಯಾರ್ಥಿಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆಕೇಂದ್ರ ವಿದೇಶಾಂಗ ಇಲಾಖೆಸಹಾಯವಾಣಿ (24*7) ತೆರೆದಿದೆ. ವಿದ್ಯಾರ್ಥಿಗಳಪೋಷಕರಿಗೆ ಎಲ್ಲಾ ರೀತಿಯ ಮಾಹಿತಿಯನ್ನುನೀಡಲಾಗುವುದು ಎಂದು ವಿದೇಶಾಂಗ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅಮೆರಿಕದ ಭಾರತೀಯ ರಾಯಭಾರಿ ಕಚೇರಿಯು ಬಂಧಿತವಿದ್ಯಾರ್ಥಿಗಳಿಗೆ ಅಗತ್ಯ ಕಾನೂನು ನೆರವು ನೀಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತ ಬಾರತೀಯ ವಿದ್ಯಾರ್ಥಿಗಳ ಪೈಕಿ ಹೆಚ್ಚಿನವರು ತೆಲಂಗಾಣ ಮತ್ತು ಆಂಧ್ರಪ್ರದೇಶದ ಮೂಲದವರಾಗಿದ್ದಾರೆ.

ಬಂಧನ ಮಾಹಿತಿ ತಿಳಿಯುತ್ತಿದ್ದಂತೆ ಅಮೆರಿಕದ ವಿದೇಶಾಂಗ ವ್ಯವಹಾರಗಳ ಸಚಿವಾಲಯವನ್ನು ಸಂಪರ್ಕ ಮಾಡಿ ಮಾಹಿತಿ ಪ‍ಡೆಯಲಾಗಿದೆ. ಈಗಾಗಲೇ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ಬಂಧಿತ ವಿದ್ಯಾರ್ಥಿಗಳಿರುವ ಸ್ಥಳಕ್ಕೆ ತೆರಳಿದ್ದಾರೆ.ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ನೆರವು ನೀಡಲಾಗುವುದು,ಇದಕ್ಕೆ ಭಾರತೀಯ ಸಮುದಾಯದ ಸ್ಥಳೀಯ ಸಂಘಟನೆಗಳು ಸಹಕಾರ ನೀಡಲು ಮುಂದಾಗಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್‌ ಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT