ಅಂಗಡಿಯಲ್ಲಿ ಸ್ಫೋಟ: 13 ಜನರ ಸಾವು

ಬುಧವಾರ, ಮೇ 22, 2019
29 °C

ಅಂಗಡಿಯಲ್ಲಿ ಸ್ಫೋಟ: 13 ಜನರ ಸಾವು

Published:
Updated:

ಭದೋಹಿ: ಉತ್ತರಪ್ರದೇಶದ ಭದೋಹಿ ನಗರದ ಅಂಗಡಿಯೊಂದರಲ್ಲಿ ಶನಿವಾರ ಮಧ್ಯಾಹ್ನ ಪಟಾಕಿಗಳ ಸ್ಫೋಟ ಸಂಭವಿಸಿ 13 ಜನರು ಮಂದಿ ಮೃತಪಟ್ಟಿದ್ದು, 6 ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಮೂರು ಮನೆಗಳು ನೆಲಸಮಗೊಂಡಿವೆ.

ಕುಸಿದಿರುವ ಮನೆಗಳ ಅವಶೇಷಗಳ ಅಡಿ ಜನರು ಸಿಲುಕಿರುವ ಶಂಕೆ ಇದ್ದು, ರಕ್ಷಣಾ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಈಗಾಗಲೆ ನಾಲ್ಕು ಶವಗಳನ್ನು ಹೊರ ತೆಗೆಯಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ವಿಧಿವಿಜ್ಞಾನ ಪರಿಣತರು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ರೋಹ್ತಾ ಬಜಾರ್‌ನ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದ್ದು, ಅಂಗಡಿ ಮಾಲೀಕರನ್ನು ಕಲಿಯಾರ್‌ ಮನ್ಸೂರಿ ಎಂದು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಪ್ರಸಾದ್‌ ತಿಳಿಸಿದ್ದಾರೆ.

ಮನ್ಸೂರಿ ಅಕ್ರಮವಾಗಿ ಅಂಗಡಿಯಲ್ಲಿ ಪಟಾಕಿ ಮಾರಾಟ ಮಾಡುತ್ತಿದ್ದರು ಎನ್ನುವ ಆರೋಪವಿದೆ. ಮನ್ಸೂರಿ ಅವರ ಮಗ ಇರ್ಫಾನ್‌ ಈ ಅಂಗಡಿ ಹಿಂಭಾಗವೇ ಕಾರ್ಪೆಟ್‌ ಕೈಗಾರಿಕೆ ನಡೆಸುತ್ತಿದ್ದು, ಅಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಲ್ಲಿ ಕೆಲವರು ಕುಸಿದಿರುವ ಮನೆಗಳ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !