ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಸಿದ ಕಟ್ಟಡ: ಇಬ್ಬರ ಸಾವು

ಎಂಟು ಮಂದಿ ಯೋಧರಿಗೆ ಗಾಯ
Last Updated 14 ಜುಲೈ 2019, 20:15 IST
ಅಕ್ಷರ ಗಾತ್ರ

ಶಿಮ್ಲಾ: ಹಿಮಾಚಲ ಪ್ರದೇಶದ ಸೋಲನ್‌ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಭಾನುವಾರ ಕುಸಿದು ಬಿದ್ದಿದ್ದು, ಯೋಧ ಸೇರಿ ಇಬ್ಬರು ಮೃತಪಟ್ಟಿದ್ದಾರೆ.

ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿರುವ ಶಂಕೆ ಇದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. 23 ಮಂದಿಯನ್ನು ರಕ್ಷಿಸಲಾಗಿದೆ. ಗಾಯಗೊಂಡವರಲ್ಲಿ ಎಂಟು ಮಂದಿ ಯೋಧರೂ ಸೇರಿದ್ದಾರೆ.

ನಾಹನ್‌ ಕುಮಾರ್‌ಹಟ್ಟಿ ರಸ್ತೆಯಲ್ಲಿನ ಈ ಕಟ್ಟಡದಲ್ಲಿ ರೆಸ್ಟೋರೆಂಟ್‌ ಇತ್ತು. ಭಾರಿ ಮಳೆ ಸುರಿಯುತ್ತಿದ್ದ ವೇಳೆ ಕಟ್ಟಡ ಕುಸಿಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಸೇನಾ ಯೋಧರು ತಮ್ಮ ಕುಟುಂಬ ಸದಸ್ಯರ ಜತೆ ಉತ್ತರಾಖಂಡಕ್ಕೆ ತೆರಳಿ ರೆಸ್ಟೋರೆಂಟ್‌ನಲ್ಲಿ ಉಪಾಹಾರ ಸೇವಿಸಲು ಬಂದಿದ್ದರು. ಇದೇ ವೇಳೆ ಕಟ್ಟಡ ಕುಸಿದಿದೆ.

ದುರ್ಘಟನಾ ಸ್ಥಳಕ್ಕೆ ಜಿಲ್ಲಾಡಳಿತದ ಅಧಿಕಾರಿಗಳು ದೌಡಾಯಿಸಿದ್ದು, ಪರಿಹಾರ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT