ಭಾನುವಾರ, ಏಪ್ರಿಲ್ 18, 2021
24 °C

ಕೇಸರ್‌ಬಾಯಿ’ ಕಟ್ಟಡ ಕುಸಿತ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ದಕ್ಷಿಣ ಮುಂಬೈನ ಡೋಂಗ್ರಿ ಪ್ರದೇಶದಲ್ಲಿ ಶತಮಾನದಷ್ಟು ಹಳೆಯ ನಾಲ್ಕು ಅಂತಸ್ತಿನ ‘ಕೇಸರ್‌ಬಾಯಿ’ ಕಟ್ಟಡ ಕುಸಿದು ಬಿದಿದ್ದು ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 

ಕಟ್ಟಡದ ಅವಶೇಷಗಳ ಅಡಿಯಲ್ಲಿ 40ರಿಂದ 50 ಮಂದಿ ಸಿಲುಕಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಕಟ್ಟಡದಲ್ಲಿ ಸುಮಾರು 15 ಕುಟುಂಬಗಳು ವಾಸ ಮಾಡುತ್ತಿದ್ದವು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿಗಳು ಅವಶೇಷಗಳಡಿ ಸಿಲುಕಿದವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇಲ್ಲಿಯವರೆಗೂ 14 ಮೃತ ದೇಹಗಳನ್ನು ಹೊರ ತೆಗೆಯಲಿದೆ. ಕಾರ್ಯಾಚರಣೆಗೆ ಪೊಲೀಸ್‌ ಶ್ವಾನಗಳನ್ನು ಬಳಕೆ ಮಾಡಲಾಗುತ್ತಿದೆ. 

ಕಟ್ಟಡ ಬಿದ್ದಿರುವ ಸ್ಥಳದ ರಸ್ತೆ ತುಂಬಾ ಕಿರಿದಾಗಿರುವುದರಿಂದ ರಕ್ಷಣಾ ಕಾರ್ಯಕ್ಕೆ ಬಳಸುವ ಯಂತ್ರಗಳು ಮತ್ತು ವಾಹನಗಳು ಘಟನಾ ಸ್ಥಳಕ್ಕೆ ತೆಗೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲವಾದ್ದರಿಂದ ರಕ್ಷಣಾ ಕಾರ್ಯ ವಿಳಂಬವಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.