ಅವಧಿ ಮೀರಿ ವಾಸ: 157 ಸರ್ಕಾರಿ ಬಂಗಲೆ ತೆರವು

7

ಅವಧಿ ಮೀರಿ ವಾಸ: 157 ಸರ್ಕಾರಿ ಬಂಗಲೆ ತೆರವು

Published:
Updated:

ನವದೆಹಲಿ: 157 ಸರ್ಕಾರಿ ಬಂಗಲೆಗಳಲ್ಲಿ ಅವಧಿ ಮೀರಿ ವಾಸಿಸುತ್ತಿದ್ದವರನ್ನು ತೆರವುಗೊಳಿಸಲಾಗಿದ್ದು, ಅವರಲ್ಲಿ ಮಾಜಿ ಮುಖ್ಯಮಂತ್ರಿಗಳೂ ಸೇರಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

‘ಅವಧಿ ಮೀರಿ ಬಂಗಲೆಗಳಲ್ಲಿ ವಾಸಿಸುತ್ತಿದ್ದವರು, ಸುಪ್ರೀಂ ಕೋರ್ಟ್‌ ಆದೇಶದ ಅನುಸಾರ ಈ ಅವಧಿಗೆ ಶುಲ್ಕ ಪಾವತಿಸಲಿದ್ದಾರೆ’ ಎಂದು ಸರ್ಕಾರದ ಪರ ವಕೀಲರು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಅವರನ್ನೊಳಗೊಂಡ ಪೀಠಕ್ಕೆ ತಿಳಿಸಿದ್ದಾರೆ.

‘ಎಷ್ಟು ಬಂಗಲೆಗಳನ್ನು ತೆರವುಗೊಳಿಸಲಾಗಿದೆ ಹಾಗೂ ಎಷ್ಟು ಶುಲ್ಕ ಸಂಗ್ರಹಿಸಲಾಗಿದೆ ಎಂದು ಇನ್ನೆರಡು ವಾರಗಳಲ್ಲಿ ವಿವರವಾದ ಮಾಹಿತಿ ಸಲ್ಲಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ನ್ಯಾಯಪೀಠ ಸೂಚಿಸಿದೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !