ಮಂಗಳವಾರ, ಫೆಬ್ರವರಿ 18, 2020
30 °C

ದಲಿತ ಬಾಲಕಿಯ ಮೇಲೆ 6 ತಿಂಗಳಿನಿಂದ ಸಾಮೂಹಿಕ ಅತ್ಯಾಚಾರ: 5 ಆರೋಪಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೋಲಾಪುರ: ಆರು ತಿಂಗಳಿನಿಂದ 16 ವರ್ಷ ಪ್ರಾಯದ ದಲಿತ ಬಾಲಕಿಯ ಮೇಲೆ 10 ಜನರ ಗುಂಪೊಂದು ನಿರಂತರವಾಗಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಮಹಾರಾಷ್ಟ್ರದ ಸೋಲಾಪುರದಲ್ಲಿ ನಡೆದಿದೆ.

ಈ ಪ್ರಕರಣದಲ್ಲಿ 5 ಆರೋಪಿಗಳನ್ನು ಬಂಧಿಸಲಾಗಿದ್ದು ಅವರ ವಿರುದ್ದ ಭಾರತೀಯ ದಂಡ ಸಂಹಿತೆ 376–ಡಿ ಅಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ನಗರದ ದೇವಸ್ಥಾನದ ಹೊರಗಡೆ ಬಾಲಕಿಯೊಬ್ಬಳು ಅಳುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ.

ಬಾಲಕಿಯು ಮಾನಸಿಕವಾಗಿ ಜರ್ಜರಿತದ್ದು, ಪೊಲೀಸರು ಅವಳಿಗೆ ಧೈರ್ಯವನ್ನು ತುಂಬಿದ ಬಳಿಕ ನಡೆದ ಘಟನೆಯನ್ನು ತಿಳಿಸಿದ್ದಾಳೆ. ಬಳಿಕ 10 ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಐದು ಜನರನ್ನು ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳಲ್ಲಿ ಕೆಲವರು ಅವಳಿಗೆ ಪರಿಚಿತರಾಗಿದ್ದರು ಎಂದು ಸಂತ್ರಸ್ತೆ ಹೇಳಿದ್ದಾರೆ.

ಆರೋಪಿಗಳಲ್ಲಿ ಕೆಲವರು ಆಟೋ ಚಾಲಕರಾಗಿದ್ದು ಬಲಾತ್ಕಾರದಿಂದ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

ವಿಜಾಪುರ ನಾಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಉಳಿದ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು