ಶನಿವಾರ, ಜೂಲೈ 4, 2020
28 °C

ದೆಹಲಿಯ ಏಮ್ಸ್‌ ಆಸ್ಪತ್ರೆಗೆ ಸೇರಿದ 195 ಆರೋಗ್ಯ ಸಿಬ್ಬಂದಿಗೆ ಕೋವಿಡ್‌-19

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಇಲ್ಲಿನ ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌ ಸಂಸ್ಥೆಯಲ್ಲಿ (ಏಮ್ಸ್‌) ಕಾರ್ಯನಿರ್ವಹಿಸುತ್ತಿರುವ 195 ಆರೋಗ್ಯ ಸಿಬ್ಬಂದಿಯಲ್ಲಿ ಕೋವಿಡ್‌-19 ಇರುವುದು ದೃಢಪಟ್ಟಿದೆ.

ಕಳೆದ ಎರಡು ದಿನಗಳಲ್ಲಿ ಒಬ್ಬ ಎಂಬಿಬಿಎಸ್ ವಿದ್ಯಾರ್ಥಿ, ಮೂವರು ವೈದ್ಯರು, ಎಂಟು ದಾದಿಯರು ಮತ್ತು ಐದು ಮೆಸ್ ಕಾರ್ಮಿಕರು ಸೇರಿದಂತೆ 50 ಕ್ಕೂ ಹೆಚ್ಚು ಆರೋಗ್ಯ ಸಿಬ್ಬಂದಿ ಕೋವಿಡ್‌-19 ಸೋಂಕಿತರಾಗಿದ್ದಾರೆ. 

ಇನ್ನುಳಿದಂತೆ ಪ್ರಯೋಗಾಲಯ ಸಿಬ್ಬಂದಿ, ತಂತ್ರಜ್ಞರು, ನೈರ್ಮಲ್ಯ ಸಿಬ್ಬಂದಿ ಮತ್ತು ಭದ್ರತಾ ಸಿಬ್ಬಂದಿಯನ್ನು ಒಳಗೊಂಡಿದ್ದಾರೆ ಎಂದು ತಿಳಿದುಬಂದಿದೆ. 

ಈವರೆಗೆ ಬೋಧಕ ವರ್ಗ, ಐವರು ವೈದ್ಯರು, 21 ಶುಶ್ರೂಷಾ ಸಿಬ್ಬಂದಿ, ಎಂಟು ತಂತ್ರಜ್ಞರು, 32 ನೈರ್ಮಲ್ಯ ಕಾರ್ಮಿಕರು ಮತ್ತು 68 ಭದ್ರತಾ ಸಿಬ್ಬಂದಿಗಳು ಸೇರಿದಂತೆ ಏಮ್ಸ್‌ಗೆ ಸೇರಿದ ಒಟ್ಟು 195 ಆರೋಗ್ಯ ಸಿಬ್ಬಂದಿ ಕೊರೊನಾ ಸೋಂಕಿತರಾಗಿದ್ದಾರೆ.

ಅವರಲ್ಲಿ ಹಲವರು ಚೇತರಿಸಿಕೊಂಡು ಮತ್ತೆ ಕೆಲಸಕ್ಕೆ ಹಾಜರಾಗಿದ್ದಾರೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು