ಮಂಗಳವಾರ, ಫೆಬ್ರವರಿ 25, 2020
19 °C

ಸಜ್ಜನ್‌ಕುಮಾರ್ ಪ್ರಕರಣ: ಸಿಬಿಐಗೆ ‘ಸುಪ್ರೀಂ’ ನೋಟಿಸ್‌

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: 1984ರ ಸಿಖ್‌ ವಿರೋಧಿ ಗಲಭೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಜ್ಜನ್‌ಕುಮಾರ್ ಅವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದು, ಈ ಸಂಬಂಧ ನ್ಯಾಯಾಲಯವು ಸಿಬಿಐಗೆ ನೋಟಿಸ್‌ ಜಾರಿ ಮಾಡಿದೆ.

ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗಯಿ, ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಹಾಗೂ ಎಸ್‌.ಕೆ ಕೌಲ್‌ ನೇತೃತ್ವದ ಪೀಠವು ಸಜ್ಜನ್‌ಕುಮಾರ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ನಡೆಸಿತು.

ಡಿಸೆಂಬರ್ 17ರಂದು ದೆಹಲಿ ಹೈಕೋರ್ಟ್‌ ತಪ್ಪಿತಸ್ಥ ಎಂದು ಘೋಷಿಸಿ ಶಿಕ್ಷೆ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಡಿಸೆಂಬರ್‌ 31ರಂದು ಸಜ್ಜನ್‌ಕುಮಾರ್ ಕೋರ್ಟ್‌ಗೆ ಶರಣಾಗಿದ್ದಾರೆ.

1984ರ ನವೆಂಬರ್ 1ರಂದು ದೆಹಲಿಯ ಕಂಟೋನ್ಮೆಂಟ್‌ನ ರಾಜ್‌ನಗರ ಪಾರ್ಟ್‌–1 ಪ್ರದೇಶದಲ್ಲಿ ನಡೆದ ಗಲಭೆಯಲ್ಲಿ ಸಿಖ್‌ ಸಮುದಾಯದ  ಐವರು ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಸಜ್ಜನ್‌ಕುಮಾರ್‌ ಪಾತ್ರ ಸಾಬೀತಾದ ಕಾರಣ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಅವರನ್ನು 1984ರಲ್ಲಿ ಇಬ್ಬರು ಸಿಖ್‌ ಯೋಧರು ಹತ್ಯೆ ಮಾಡಿದ ನಂತರ ಗಲಭೆ ನಡೆದಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು