ಗುರುವಾರ , ಆಗಸ್ಟ್ 6, 2020
28 °C

ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಸಿಆರ್‌ಪಿಎಫ್‌ನ 5 ಯೋಧರು ಹುತಾತ್ಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಗರ:  ಜಮ್ಮು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಬುಧವಾರ ಉಗ್ರರು ದಾಳಿ ನಡೆಸಿದ್ದು ಇದರಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್)ನ 5 ಯೋಧರು ಹುತಾತ್ಮರಾಗಿದ್ದಾರೆ.

ಅನಂತ್‌ನಾಗ್‌ನ ಕೆಪಿ ರಸ್ತೆಯಲ್ಲಿ ಸಿಆರ್‌ಪಿಎಫ್ ಯೋಧರು ಗಸ್ತು ತಿರುಗುತ್ತಿದ್ದಾಗ ಇಬ್ಬರು ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ.
ಈ ದಾಳಿಯಲ್ಲಿ 5 ಯೋಧರು ಹುತಾತ್ಮರಾಗಿದ್ದಾರೆ.

ಇಲ್ಲಿ ಯೋಧರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ.

ದಾಳಿಯಲ್ಲಿ ಓರ್ವ ಉಗ್ರ ಮತ್ತು ಅನಾಮಿಕ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ. ಅನಂತ್‌ನಾಗ್  ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಫೀಸರ್ ಅರ್ಷದ್ ಅಹಮದ್ ಅವರಿಗೆ ಗಾಯಗಳಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶ್ರೀನಗರಕ್ಕೆ ಕರೆದೊಯ್ಯಲಾಗಿದೆ ಎಂದು ಸುದ್ದಿಮೂಲಗಳು ವರದಿ ಮಾಡಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು