ಶುಕ್ರವಾರ, ಜೂನ್ 5, 2020
27 °C

ದೆಹಲಿ| ದಿನಸಿ ಸಾಮಾಗ್ರಿ ಖರೀದಿಸಲು ಹೋಗಿದ್ದ  ಮಹಿಳಾ ವೈದ್ಯರ ಮೇಲೆ ಹಲ್ಲೆ

ಪಿಟಿಐ Updated:

ಅಕ್ಷರ ಗಾತ್ರ : | |

covid

ನವದೆಹಲಿ: ದಕ್ಷಿಣ ದೆಹಲಿಯ ಸಫ್ದಾರ್‌ಗಂಜ್ ಆಸ್ಪತ್ರೆಯ ಇಬ್ಬರು ಮಹಿಳಾ ವೈದ್ಯರು ದಿನಸಿ ಸಾಮಾಗ್ರಿ ಖರೀದಿಗಾಗಿ ಹೊರಗೆ ಹೋದಾಗ ಅವರ ಮೇಲೆ ಹಲ್ಲೆ ನಡೆದ ಘಟನೆ ವರದಿಯಾಗಿದೆ.

ಮಹಿಳಾ ವೈದರು ಬುಧವಾರ ಸಂಜೆ ಮನೆ ಬಳಿ ಇರುವ ಗೌತಮ್ ನಗರದ ಮಾರುಕಟ್ಟೆಗೆ ಹೋಗಿದ್ದರು. ಆಗ ಅಲ್ಲಿದ್ದ ವ್ಯಕ್ತಿಯೊಬ್ಬ ವೈದ್ಯರು ಮನೆಯಿಂದ ಹೊರಗೆ ಯಾಕೆ ಬಂದಿದ್ದೀರಿ? ವೈದ್ಯರಿಂದ ಕೊರೊನಾ ವೈರಸ್ ಹರಡುತ್ತದೆ ಎಂದು ಹೇಳಿ ಹಲ್ಲೆ ನಡೆಸಿದ್ದಾನೆ.

ಹಲ್ಲೆಗೊಳಗಾದ  ವೈದ್ಯರು ಪೊಲೀಸರಿಗೆ ಕರೆ ಮಾಡಿದ್ದು, ಪೊಲೀಸರು ಬರುವ ಹೊತ್ತಿಗೆ ಆ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾನೆ.

ಹಲ್ಲೆ ನಡೆಸಿದ ವ್ಯಕ್ತಿ ಒಳಾಂಗಣ ವಿನ್ಯಾಸಕಾರನಾಗಿದ್ದು, ಆತನನ್ನು ಬುಧವಾರ ರಾತ್ರಿ ಬಂಧಿಸಲಾಗಿದೆ. ವೈದ್ಯರಿಗೆ ಸಫ್ದಾರ್‌ಗಂಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು