ಗುರುವಾರ , ಜೂನ್ 24, 2021
23 °C

ಭದ್ರತಾ ಪಡೆ ಗುಂಡಿಗೆ ಇಬ್ಬರು ಉಗ್ರರು ಬಲಿ

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: ಶೋಧ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿವೆ.

ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದು, ಬಾರಾಮುಲ್ಲಾ ಜಿಲ್ಲೆಯ ಡರ್ಸೊ ಗ್ರಾಮದ ರಫಿಯಾಬಾದ್‌ ಪ್ರದೇಶದಲ್ಲಿ ಭದ್ರತಾ ಪಡೆ ಯೋಧರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದರು. ಪ್ರತಿಯಾಗಿ ದಾಳಿ ನಡೆಸಿದಾಗ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹತರಾದ ಉಗ್ರರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ಇವರಿಬ್ಬರ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸ್‌ ಮಹಾನಿರ್ದೇಶಕ ಎಸ್‌.ಪಿ.ವೇದ್‌ ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು