ಕಾಶ್ಮೀರದಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರು ಬಲಿ

ಮಂಗಳವಾರ, ಏಪ್ರಿಲ್ 23, 2019
33 °C

ಕಾಶ್ಮೀರದಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರು ಬಲಿ

Published:
Updated:

ಶ್ರೀನಗರ: ಕಾಶ್ಮೀರದ ಶೋಫಿಯಾನ್‌ ಜಿಲ್ಲೆಯ ಗಹಾದ್‌ ಪ್ರದೇಶದಲ್ಲಿ ಭದ್ರತಾ ಪಡೆಗಳು ಎನ್‌ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ

ಉಗ್ರರು ಇರುವ ಖಚಿತ ಮಾಹಿತಿ ಪಡೆದು ಎನ್‌ಕೌಂಟರ್‌ ಮಾಡಲಾಗಿದೆ. ಘಟನೆಯಲ್ಲಿ ಉಗ್ರರು ಪ್ರತಿ ದಾಳಿ ನಡೆಸಿದ್ದು ಇಬ್ಬರು ಯೋಧರಿಗೆ ಗಾಯಗಳಾಗಿವೆ. ಹತ್ಯೆಯಾಗಿರುವ ಉಗ್ರರ ಬಗ್ಗೆ ವಿಚಾರಣೆ ನಡೆಸಲಾಗುತ್ತಿದ್ದು ಅವರು ಯಾವ ಸಂಘಟನೆಗೆ ಸೇರಿದವರು ಎಂಬುದು ಇನ್ನು ತಿಳಿದು ಬಂದಿಲ್ಲ ಎಂದು ಸೇನಾ ಅಧಿಕಾರಿಗಳು ಹೇಳಿದ್ದಾರೆ.

ಉಗ್ರರು ಅಡಗಿದ್ದ ಮನೆಯಲ್ಲಿ ಶಸ್ತ್ರಾಸ್ತ್ರಗಳು, ಜೆಲೆಟಿನ್‌ ಹಾಗೂ ಸ್ಫೋಟಕ ಸಾಮಗ್ರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪ್ರದೇಶದಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಉಗ್ರರು ಇರುವ ಶಂಕೆ ವ್ಯಕ್ತವಾಗಿದ್ದು ಯೋಧರು ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ. 

ಬರಹ ಇಷ್ಟವಾಯಿತೆ?

 • 1

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !