ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳೆದ 24 ಗಂಟೆಗಳಲ್ಲಿ ಬಿಎಸ್ಎಫ್‌ನ 21 ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು

Last Updated 29 ಜೂನ್ 2020, 4:59 IST
ಅಕ್ಷರ ಗಾತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) 21 ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಸೋಮವಾರ ಬಿಎಸ್‌ಎಫ್ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ಬಿಎಸ್‌ಎಫ್‌ನ 21 ಸಿಬ್ಬಂದಿಗೆ ಕೋವಿಡ್-19 ಇರುವುದು ಪತ್ತೆಯಾಗಿದ್ದು, 18 ಜನರು ಗುಣಮುಖರಾಗಿದ್ದಾರೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಈವರೆಗೂ 655 ಜನರು ಸೋಂಕಿನಿಂದ ಚೇತರಿಕೆ ಕಂಡಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಬಿಎಸ್‌ಎಫ್‌ನಲ್ಲಿ 305 ಸಕ್ರಿಯ ಪ್ರಕರಣಗಳಿವೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ ದೇಶದಲ್ಲಿ, ಕಳೆದ 24 ಗಂಟೆಗಳಲ್ಲಿ 19,459 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 380 ಜನರು ಸಾವಿಗೀಡಾಗಿದ್ದಾರೆ. ದೇಶದಲ್ಲಿ ಒಟ್ಟಾರೆ 5,48,318 ಜನರಿಗೆ ಸೋಂಕು ತಗುಲಿದ್ದು, 2,10,120 ಸಕ್ರಿಯ ಪ್ರಕರಣಗಳಿವೆ. 3,21,723 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದರೆ, ಒಟ್ಟಾರೆ 16,475 ಜನರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT