ಶುಕ್ರವಾರ, ಮೇ 29, 2020
27 °C

ಕೊರೊನಾ: ಮಹಾರಾಷ್ಟ್ರದಲ್ಲಿ ಒಂದೇ ದಿನ 2347 ಪ್ರಕರಣ, 63 ಸಾವು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Coronavirus

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಹರಡುವಿಕೆ ಹೆಚ್ಚಾಗುತ್ತಿದೆ. ಒಂದೇ ದಿನ 2,347 ಜನರಿಗೆ ಸೋಂಕು ತಗುಲಿದ್ದು, 63 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಇದರೊಂದಿಗೆ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 33,053ಕ್ಕೆ ಏರಿಕೆಯಾಗಿದೆ. ಈವರೆಗೆ 1,198 ಜನ ಮೃತಪಟ್ಟಿದ್ದಾರೆ. ಭಾನುವಾರ 600 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಟ್ಟಾರೆಯಾಗಿ ಈವರೆಗೆ 7,688 ಜನ ಚೇತರಿಸಿಕೊಂಡಿದ್ದಾರೆ.

ದೇಶದಾದ್ಯಂತ ಒಂದೇ ದಿನ 4,987 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಬೆಳಿಗ್ಗೆಯ ಪ್ರಕಟಣೆಯಲ್ಲಿ ತಿಳಿಸಿತ್ತು. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 90,927 ತಲುಪಿತ್ತು.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು