ನವದೆಹಲಿ (ಪಿಟಿಐ): ಚುನಾವಣಾ ಪ್ರಕ್ರಿಯೆಗೆ ಅಡ್ಡಿ ಪಡಿಸಿದ ಪ್ರಕರಣದಲ್ಲಿ ಎಎಪಿ ಶಾಸಕ ಮನೋಜ್ ಕುಮಾರ್ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
2013ರಲ್ಲಿ ನಡೆದ ವಿಧಾನಸಭೆ ಚುನಾವಣೆ ವೇಳೆ ಕಲ್ಯಾಣ್‌ಪುರಿ ಪ್ರದೇಶ ಮತದಾನ ಕೇಂದ್ರದಲ್ಲಿ ಚುನಾವಣೆಗೆ ಅಡ್ಡಿ ಪಡಿಸಿದ್ದಕ್ಕಾಗಿ ಅವರ ಮೇಲೆ ದೂರು ದಾಖಲಾಗಿತ್ತು.
₹10 ಸಾವಿರದ ಬಾಂಡ್ ಆಧಾರದ ಮೇಲೆ ಅವರಿಗೆ ಜಾಮೀನು ನೀಡಲಾಗಿದೆ. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.