ಭಾನುವಾರ, ಏಪ್ರಿಲ್ 11, 2021
30 °C

272 ಮಂದಿಗೆ ವಿದೇಶಿಯರಿಗೆ ಪದ್ಮ ಪುರಸ್ಕಾರ’

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: 1954ರಿಂದ ಈಚೆಗೆ ವಿದೇಶಿಯರು, ಅನಿವಾಸಿ ಭಾರತೀಯರು, ಸಾಗರೋತ್ತರ ಭಾರತೀಯರು ಮತ್ತು ಭಾರತ ಮೂಲದ 272 ಮಂದಿಗೆ ಪದ್ಮ ಪುರಸ್ಕಾರ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ. 

ಜನಾಂಗ, ಉದ್ಯೋಗ, ಸ್ಥಾನಮಾನ ಮತ್ತು ಲಿಂಗ ಭೇದವಿಲ್ಲದೇ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ್ ರೈ ಲೋಕಸಭೆಯಲ್ಲಿ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. 

ವೈದ್ಯರು ಮತ್ತು ವಿಜ್ಞಾನಿಗಳನ್ನು ಹೊರತುಪಡಿಸಿ ಸರ್ಕಾರಿ ಉದ್ಯೋಗಿಗಳು ಮತ್ತು ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡುವವರನ್ನು ಈ ಪುರಸ್ಕಾರಕ್ಕೆ ಪರಿಗಣಿಸುವುದಿಲ್ಲ ಎಂದು ಅವರು ಹೇಳಿದರು.

ಪದ್ಮ ಪ್ರಶಸ್ತಿ  ಆಯ್ಕೆಗೆ ಯಾವುದೇ ಕಠಿಣ ಮಾನದಂಡಗಳು ಅನ್ವಯಿಸುವುದಿಲ್ಲ. ವ್ಯಕ್ತಿಯ ಜೀವಮಾನದ ಸಾಧನೆ ಮತ್ತು ಸಾರ್ವಜನಿಕ ಸೇವೆ ಮುಖ್ಯವಾಗುತ್ತದೆ ಎಂದು ತಿಳಿಸಿದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು