ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್‌ಗೆ ವಿನಾಯಿತಿ ಇಲ್ಲ: ಅರವಿಂದ್‌ ಕೇಜ್ರಿವಾಲ್

Last Updated 26 ಏಪ್ರಿಲ್ 2020, 21:43 IST
ಅಕ್ಷರ ಗಾತ್ರ

ನವದೆಹಲಿ: ‘ಕೇಂದ್ರ ಗೃಹಸಚಿವಾಲಯದ ನಿಯಮಾವಳಿಗಳಿಗೆ ಹೊರತಾಗಿ ದೆಹಲಿಯಲ್ಲಿ ಲಾಕ್‌ಡೌನ್‌ಗೆ ವಿನಾಯಿತಿ ನೀಡುವುದಿಲ್ಲ’ ಎಂದು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಭಾನುವಾರ ಹೇಳಿದ್ದಾರೆ.

‘ಮೇ 3ರವರೆಗೂ ದೇಶದಾದ್ಯಂತ ಲಾಕ್‌ಡೌನ್‌ ಇರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು. ಇದಾದ ಬಳಿಕ ಲಾಕ್‌ಡೌನ್‌ ಮುಂದುವರಿಸಬೇಕೆ ಅಥವಾ ಬೇಡವೆ ಎನ್ನುವ ಕುರಿತು ಕೇಂದ್ರ ಸರ್ಕಾರ ನಿರ್ಣಯ ಕೈಗೊಳ್ಳಲಿ. ಬಳಿಕ ನಾವು ಮುಂದಿನ ಕ್ರಮಗಳನ್ನು ನಿರ್ಧರಿಸುತ್ತೇವೆ ಎಂದು ಕೇಜ್ರಿವಾಲ್‌ ತಿಳಿಸಿದರು.

‘ಮೇ 3ರವರೆಗೆ ಮಾರುಕಟ್ಟೆ ಹಾಗೂ ಮಾಲ್‌ಗಳನ್ನು ತೆರೆಯಲು ಅವಕಾಶ ನೀಡುವುದಿಲ್ಲ. ಆದರೆ ಪ್ರತ್ಯೇಕವಾಗಿರುವ ಅಂಗಡಿಗಳನ್ನು ತೆರೆಯುವ ಕುರಿತು ಕೇಂದ್ರ ನೀಡಿರುವ ಮಾರ್ಗಸೂಚಿಯನ್ನು ಮಾತ್ರಜಾರಿಗೆ ತರಲಾಗುತ್ತಿದೆ’ ಎಂದು ಅವರು ಹೇಳಿದರು.

‘ಸೋಂಕಿಗೆ ಯಾವುದೇ ಧರ್ಮದ ತಾರತಮ್ಯ ಇಲ್ಲ. ಮುಸ್ಲಿಮರ ಪ್ಲಾಸ್ಮಾವನ್ನು ಹಿಂದೂವಿನ ಹಾಗೂ ಹಿಂದೂವಿನ ಪ್ಲಾಸ್ಮಾವನ್ನು ಮುಸ್ಲಿಮರ ಚಿಕಿತ್ಸೆಗೆ ಬಳಸಿಕೊಳ್ಳಬಹುದು. ಪ್ಲಾಸ್ಮಾ ಚಿಕಿತ್ಸೆಯಿಂದ ಆಶಾದಾಯಕ ಬೆಳವಣಿಗೆಯಾಗುತ್ತಿದೆ. ಕೋವಿಡ್‌-19ರಿಂದ ಗುಣಮುಖರಾದವರು ಪ್ಲಾಸ್ಮಾ ನೀಡಲು ಮುಂದಾಗಬೇಕು’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT