ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ 2ನೇ ಹಂತ ಚುನಾವಣೆ: ಬಹಿರಂಗ ಪ್ರಚಾರ ಅಂತ್ಯ ಇಂದು

Last Updated 20 ಏಪ್ರಿಲ್ 2019, 20:15 IST
ಅಕ್ಷರ ಗಾತ್ರ

ಬೆಂಗಳೂರು: ಮೊದಲ ಹಂತದಲ್ಲಿ ಚುನಾವಣೆ ನಡೆದ 14 ಲೋಕಸಭಾ ಕ್ಷೇತ್ರಗಳಲ್ಲಿ ಸೋಲು–ಗೆಲುವಿನ ಲೆಕ್ಕಾಚಾರ ಮುಂದುವರಿದಿರುವ ಮಧ್ಯೆಯೇ, ಎರಡನೇ ಹಂತದಲ್ಲಿ ಇದೇ 23ರಂದು ಮತದಾನ ನಡೆಯಲಿರುವ ಉಳಿದ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರ ಭಾನುವಾರ (ಏ. 21) ಅಂತ್ಯವಾಗಲಿದೆ.

ರಾಜ್ಯದ ಬಿರುಬಿಸಿಲಿನ ಭಾಗದಲ್ಲಿರುವ ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ, ಗುಲ್ಬರ್ಗ, ರಾಯಚೂರು, ಬೀದರ್‌, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿರುವ 2.67 ಕೋಟಿ ಮತದಾರರು 237 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ.

ಕೇಂದ್ರ ಸಚಿವರಾದ ರಮೇಶ ಜಿಗಜಿಣಗಿ, ಅನಂತಕುಮಾರ್‌ ಹೆಗಡೆ, ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಧು ಬಂಗಾರಪ್ಪ, ಸಂಸದರಾದಬಿ.ವೈ. ರಾಘವೇಂದ್ರ, ಜಿ.ಎಂ. ಸಿದ್ದೇಶ್ವರ, ಪ್ರಹ್ಲಾದ ಜೋಶಿ, ಕರಡಿ ಸಂಗಣ್ಣ, ಪ್ರಕಾಶ ಹುಕ್ಕೇರಿ, ಶಿವಕುಮಾರ್‌ ಉದಾಸಿ ಕಣದಲ್ಲಿರುವ ಪ್ರಮುಖರು. ಮತದಾರರನ್ನು ಓಲೈಸುವ ಮೂಲಕ ತಮ್ಮ ಹುರಿಯಾಳ ಗೆಲುವಿಗೆ ಮೈತ್ರಿಕೂಟ (ಜೆಡಿಎಸ್‌– ಕಾಂಗ್ರೆಸ್‌) ಮತ್ತು ಬಿಜೆಪಿ ನಾಯಕರು ಕೊನೆಕ್ಷಣದ ಕಸರತ್ತುನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT