ಬೆಲ್ಲ ತಯಾರಿಸಲು ಪ್ಲಾಸ್ಟಿಕ್ ತ್ಯಾಜ್ಯ ಬಳಸುತ್ತಿದ್ದ ಮೂವರ ಬಂಧನ

ಮುಜಾಫರ್‌ನಗರ: ಬೆಲ್ಲ ತಯಾರಿಕೆಗೆ ಉರುವಲಾಗಿ ಪ್ಲಾಸ್ಟಿಕ್ ತ್ಯಾಜ್ಯ ಬಳಸುತ್ತಿದ್ದ ಆರೋಪದ ಮೇಲೆ ಇಲ್ಲಿನ ಭೋಕಹೇರಿ ಗ್ರಾಮದ ಮೂವರನ್ನು ಭೋಪಾ ಠಾಣೆಯ ಪೊಲೀಸರು ಗುರುವಾರ ಬಂಧಿಸಿದ್ದಾರೆ.
‘ಗ್ರಾಮದ ಬೆಲ್ಲ ಉತ್ಪಾದನಾ ಘಟಕದ (ಆಲೆಮನೆ) ಮೇಲೆ ದಾಳಿ ನಡೆಸಿ ಮೂವರನ್ನು ಬಂಧಿಸಲಾಯಿತು’ ಎಂದು ಠಾಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.
ಈ ಮೂವರು ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತಪ್ಪಿಸಿಕೊಂಡಿರುವ ಇಬ್ಬರ ಬಂಧನಕ್ಕೆ ಬಲೆ ಬೀಸಲಾಗಿದೆ. ಪ್ಲಾಸ್ಟಿಕ್ ತ್ಯಾಜ್ಯ ಇದ್ದ ಎರಡು ಲೋಡ್ ಟ್ರಾಕ್ಟರ್ ಟ್ರಾಲಿಗಳನ್ನು ಸ್ಥಳದಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.