ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಮಾಚಾರದ ಶಂಕೆ; ಮಲ ತಿನ್ನಿಸಿ ಮೂವರ ಮೇಲೆ ದೌರ್ಜನ್ಯ

Last Updated 23 ಜುಲೈ 2019, 19:40 IST
ಅಕ್ಷರ ಗಾತ್ರ

ಗಿರಿದಿಹ್ (ಜಾರ್ಖಂಡ್): ವಾಮಾಚಾರ ಮಾಡುತ್ತಿದ್ದ ಶಂಕೆಯ ಮೇಲೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರಿಗೆ ಬಲವಂತವಾಗಿ ಮಲ ತಿನ್ನಿಸಿದ ಅಮಾನವೀಯವ ಕೃತ್ಯ ಕಳೆದ ಮಂಗಳವಾರ ಇಲ್ಲಿನ ಜಾಂಜ್ರಿ ಮೊಹಲ್ಲಾದಲ್ಲಿ ನಡೆದಿದೆ.

ಕೃತ್ಯವನ್ನು ದೃಢಪಡಿಸಿರುವ ಪೊಲೀಸರು, ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ, ಇಬ್ಬರು ತಲೆಮರೆಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಪ್ರಕರಣದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬಳಿಕ ನಾಲ್ವರನ್ನು ಬಂಧಿಸಲಾಗಿದೆ.

‘ಮೂವರು ವಾಮಾಚಾರ ನಡೆಸುತ್ತಿದ್ದು, ಇದರಿಂದಾಗಿಸ್ಥಳೀಯ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದರು’ ಎಂದು ಬಂಧಿತರು ಆರೋಪಿಸಿದ್ದಾರೆ. ಕಳೆದ ವಾರ ಕೂಡಾ ಇಬ್ಬರು ಮಹಿಳೆಯರೂ ಸೇರಿದಂತೆ ನಾಲ್ವರು ಬುಡಕಟ್ಟು ಜನರ ಮೇಲೆ ವಾಮಾಚಾರ ಮಾಡಿದ ಶಂಕೆಯಡಿ ಮೇಲೆ ಗುಮ್ಲಾ ಜಿಲ್ಲೆಯಲ್ಲಿ ಗುಂಪೊಂದು ಹಲ್ಲೆ ನಡೆಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT