ಮಹೋಬಾ: ವಲಸೆ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಡಿಸಿಎಂ ವಾಹನ ಮಗುಚಿ ಮೂವರು ವಲಸೆ ಕಾರ್ಮಿಕರು ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.

ಉತ್ತರ ಪ್ರದೇಶದ ಜಾನ್ಸಿ-ಮಿರ್ಜಾಪುರ್ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿಸಂಸ್ಥೆ ಎಎಎನ್ಐ ವರದಿ ಮಾಡಿದೆ.

ಸರಕು ಸಾಗಣೆ ಮಾಡುವ ವಾಹನದಲ್ಲಿ ಸುಮಾರು 17 ಮಂದಿ ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:ಊರು ಸೇರಲು ನೂರು ಸಂಕಟ; ವಲಸೆ ಕಾರ್ಮಿಕರ ನೋವಿನ ಚಿತ್ರಗಳು

ಮೇ 16ರಂದು ಉತ್ತರ ಪ್ರದೇಶದ ಔರೆಯಾ ಸಮೀಪ ಎರಡು ಲಾರಿಗಳ ನಡುವೆ ಸಂಭವಿಸಿದ ಅಪಘಾತದಲ್ಲಿ 26 ಮಂದಿ ಮೃತಪಟ್ಟಿದ್ದರು. ಎರಡೂ ವಾಹನಗಳು ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದವು. ದುರಂತದಲ್ಲಿ 34 ಮಂದಿ ಗಾಯಗೊಂಡಿದ್ದರು.

ಮತ್ತೊಂದೆಡೆ ಮೇ 8ರಂದು ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಗೂಡ್ಸ್ ರೈಲು ಹರಿದು ಹಳಿ ಮೇಲೆ ಮಲಗಿದ್ದ 16 ಮಂದಿ ವಲಸೆ ಕಾರ್ಮಿಕರು ಮೃತಪಟ್ಟು, ಐವರು ಗಾಯಗೊಂಡಿದ್ದರು. ಔರಂಗಾಬಾದ್ನ ಕರ್ಮಡ್ ಪೊಲೀಸ್ ಠಾಣೆ ಸರಹದ್ದಿನ ಪರ್ಬನಿ-ಮನ್ಮಡ್ ವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು ಗೂಡ್ಸ್ ರೈಲು ಜಲ್ನಾದಿಂದ ಔರಂಗಾಬಾದ್ ಕಡೆಗೆ ಸಂಚರಿಸುತ್ತಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.