ಬುಧವಾರ, ಜೂನ್ 29, 2022
26 °C

ಶ್ರೀನಗರ: ಎನ್‌ಕೌಂಟರ್‌ಗೆ ಮೂವರು ಉಗ್ರರು ಬಲಿ

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: ಇಲ್ಲಿನ ಹೊರವಲಯದ ಮುಜಾಗುಂಡ್‌ ಪ್ರದೇಶದಲ್ಲಿ ಭದ್ರತಾಪ‍ಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರು ಹತರಾಗಿದ್ದು, ಯೋಧರೊಬ್ಬರು ಗಾಯಗೊಂಡಿದ್ದಾರೆ.

ಪೊಲೀಸರು ಮತ್ತು ಯೋಧರು ಜಂಟಿಯಾಗಿ ಶೋಧಕಾರ್ಯ ನಡೆಸುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಯೋಧರು ಪ್ರತಿದಾಳಿ ನಡೆಸಿ ಭಯೋತ್ಪಾದಕರನ್ನು ಹತ್ಯೆಗೈದಿದ್ದಾರೆ ಎಂದು ಸೇನಾ ವಕ್ತಾರರು ಹೇಳಿದ್ದಾರೆ.

ಮೃತ ಉಗ್ರರ ಗುರುತು ಪತ್ತೆಯಾಗಿಲ್ಲ. ಗುಂಡಿನ ಕಾಳಗ ನಡೆದ ಪ್ರದೇಶದಿಂದ ಶಸ್ತ್ರಾಸ್ತ್ರಗಳನ್ನು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ.

ಎನ್‌ಕೌಂಟರ್‌ ನಡೆದ ಪ್ರದೇಶದಲ್ಲಿ ಭದ್ರತಾಪಡೆಗಳು ಮತ್ತು ಯುವಕರ ನಡುವೆ ಘರ್ಷಣೆ ನಡೆದಿದ್ದು, ಮುಂಜಾಗ್ರತಾ ಕ್ರಮವಾಗಿ ಮೊಬೈಲ್‌ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು