ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳದಲ್ಲಿ 3 ಶಾಸಕರು, 50ಕ್ಕೂ ಹೆಚ್ಚು ಕೌನ್ಸಿಲರ್‌ಗಳು ಬಿಜೆಪಿ ಸೇರ್ಪಡೆ

Last Updated 28 ಮೇ 2019, 12:21 IST
ಅಕ್ಷರ ಗಾತ್ರ

ಕೋಲ್ಕತ್ತ​: ಲೋಕಸಭೆ ಚುನಾವಣೆ ಬಳಿಕ ಪಶ್ಚಿಮ ಬಂಗಾಳದಲ್ಲಿ ರಾಜಕೀಯದ್ರುವೀಕರಣಆರಂಭವಾಗಿದ್ದು ಮೂವರು ಶಾಸಕರು ಹಾಗೂ 50ಕ್ಕೂ ಹೆಚ್ಚು ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಇಬ್ಬರು ಟಿಎಂಸಿ ಶಾಸಕರು, ಒಬ್ಬರು ಸಿಪಿಐ(ಎಂ)ಶಾಸಕರು ಹಾಗೂ50ಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆಗಳ ಸದಸ್ಯರು ಮಂಗಳವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ದೆಹಲಿಯಲ್ಲಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಅಧ್ಯಕ್ಷ ಮುಕುಲ್‌ ರಾಯ್‌ ಅವರು 3 ಶಾಸಕರು ಮತ್ತು ಕೌನ್ಸಿಲರ್‌ಗಳನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಕೈಲಾಶ್‌ ವಿಜಯವರ್ಗಿಯಾ ಉಪಸ್ಥಿತರಿದ್ದರು.

ಟಿಎಂಸಿಯ ಶಾಸಕರಾದ ಸುಭಾಶ್‌ ರಾಯ್‌, ತುಷಾರ್‌ ಕಾಂತಿ ಭಟ್ಟಾಚಾರ್ಯ ಹಾಗೂಸಿಪಿಎಂಶಾಸಕ ದೇವೇಂದ್ರ ರಾಯ್ಸೇರಿದಂತೆಟಿಎಂಸಿಯ 50ಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆಗಳ ಸದಸ್ಯರು ಬಿಜೆಪಿ ಸೇರಿದ್ದಾರೆ.

ಇದುಮೊದಲ ಹಂತದ ಸೇರ್ಪಡೆ ಮಾತ್ರ ಮುಂದಿನ ದಿನಗಳಲ್ಲಿ ಇನ್ನು ಕೆಲವು ಟಿಎಂಸಿ ಶಾಸಕರು ಬಿಜೆಪಿ ಸೇರಲಿದ್ದಾರೆಎಂದುಕೈಲಾಶ್‌ವಿಜಯವರ್ಗಿಯಾಹೇಳಿದ್ದಾರೆ.

ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿನರೇಂದಮೋದಿ 40ಕ್ಕೂ ಹೆಚ್ಚು ಟಿಎಂಸಿ ಶಾಸಕರು ಬಿಜೆಪಿಯ ಸಂಪರ್ಕದಲ್ಲಿ ಇದ್ದಾರೆ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT