ಲೋಕಸಭೆ ಚುನಾವಣೆ ಸೋಲಿನ ಪರಿಣಾಮ: ಕಾಂಗ್ರೆಸ್‌ನಲ್ಲಿ ಮುಂದುವರಿದ ರಾಜೀನಾಮೆ ಪ‍ರ್ವ

ಮಂಗಳವಾರ, ಜೂನ್ 25, 2019
29 °C
ಈವರೆಗೆ ರಾಜ್ಯ ಘಟಕಗಳ ಆರು ಮಂದಿ ಅಧ್ಯಕ್ಷರಿಂದ ರಾಜೀನಾಮೆ

ಲೋಕಸಭೆ ಚುನಾವಣೆ ಸೋಲಿನ ಪರಿಣಾಮ: ಕಾಂಗ್ರೆಸ್‌ನಲ್ಲಿ ಮುಂದುವರಿದ ರಾಜೀನಾಮೆ ಪ‍ರ್ವ

Published:
Updated:

ನವದೆಹಲಿ: ಲೋಕಸಭೆ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ ಕಾಂಗ್ರೆಸ್‌ನ ರಾಜ್ಯ ಘಟಕಗಳ ಅಧ್ಯಕ್ಷರ ಸಂಖ್ಯೆ ಆರಕ್ಕೆ ತಲುಪಿದೆ.

ಕಾಂಗ್ರೆಸ್‌ನ ಉತ್ತರ ಪ್ರದೇಶ ಘಟಕದ ಅಧ್ಯಕ್ಷ ರಾಜ್ ಬಬ್ಬರ್, ಒಡಿಶಾ ಘಟಕದ ಅಧ್ಯಕ್ಷ ನಿರಂಜನ್ ಪಟ್ನಾಯಕ್ ಮತ್ತು ಮಹಾರಾಷ್ಟ್ರದ ಅಶೋಕ್ ಚವಾಣ್ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಇವರ ಸಾಲಿಗೆ ಈಗ ಪಂಜಾಬ್‌ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಸುನಿಲ್ ಜಾಖಡ್‌, ಜಾರ್ಖಂಡ್‌ ರಾಜ್ಯ ಘಟಕದ ಅಧ್ಯಕ್ಷ ಅಜಯ್‌ ಕುಮಾರ್‌ ಮತ್ತು ಅಸ್ಸಾಂ ಘಟಕದ ಅಧ್ಯಕ್ಷ ರಿಪುನ್ ಬೋರಾ ಸೇರಿದ್ದಾರೆ.

ಇದನ್ನೂ ಓದಿ: ಹೀನಾಯ ಸೋಲು: ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ 3 ಕಾಂಗ್ರೆಸ್ ನಾಯಕರು

‘ರಾಜ್ಯದಲ್ಲಿ ಪಕ್ಷದ ಸೋಲಿಗೆ ಕಾರಣವೇನೇ ಇರಬಹುದು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ’ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ ರಿಪುನ್ ಬೋರಾ ಉಲ್ಲೇಖಿಸಿದ್ದಾರೆ.

ಈ ಮಧ್ಯೆ, ಚುನಾವಣೆಯಲ್ಲಿ ಪಕ್ಷದ ಸೋಲಿನ ಹೊಣೆಗಾರಿಕೆ ಹೊತ್ತು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಮತ್ತು ಎಐಸಿಸಿ ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಆಗ್ರಹವೂ ಕೇಳಿಬಂದಿದೆ. ಹೈದರಾಬಾದ್‌ನ ಹಿರಿಯ ಕಾಂಗ್ರೆಸ್ ಮುಖಂಡ ಮರ್ರಿ ಶಶಿಧರ ರೆಡ್ಡಿ, ‘ರಾಜೀನಾಮೆ ಸಲ್ಲಿಸಿ ಕಾರ್ಯಕಾರಿ ಸಮಿತಿ ಪುನರ್ರಚನೆಗೆ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ಮುಕ್ತ ಅವಕಾಶ ಕಲ್ಪಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಾಹುಲ್‌ ಗಾಂಧಿ

‘ಪಕ್ಷದ ಸೋಲಿಗೆ ರಾಹುಲ್ ಗಾಂಧಿ ಒಬ್ಬರೇ ಹೊಣೆಯಲ್ಲ. ಸಾಮೂಹಿಕವಾಗಿ ಎಲ್ಲರೂ ಹೊಣೆಗಾರರು. ಪಕ್ಷ ಹಲವು ರಾಜ್ಯಗಳಲ್ಲಿ ಸೋತಿದೆ. ಎಲ್ಲ ರಾಜ್ಯಗಳಲ್ಲಿ ಪಕ್ಷದ ಅಧ್ಯಕ್ಷರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು’ ಎಂದು ಅಶೋಕ್ ಚವಾಣ್‌ ಪ್ರತಿಪಾದಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 10

  Happy
 • 1

  Amused
 • 1

  Sad
 • 1

  Frustrated
 • 6

  Angry

Comments:

0 comments

Write the first review for this !