ಅಮರಾವತಿ: ‘ಆಡಳಿತ ವಿಕೇಂದ್ರೀಕರಣ ಉದ್ದೇಶದಿಂದ ಆಂಧ್ರಪ್ರದೇಶದಲ್ಲಿ ಮೂರು ರಾಜಧಾನಿಗಳನ್ನು ಮಾಡುವ ಚಿಂತನೆ ಇದೆ’ ಎಂದು ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಈ ಬಗ್ಗೆ ನಡೆದ ಚರ್ಚೆಗೆ ಉತ್ತರಿಸಿದ ಅವರು, ‘ನಮಗೆ ವಿಭಿನ್ನ ರೀತಿಯ ಮೂರು ರಾಜಧಾನಿಗಳು ಅಗತ್ಯ. ಈಗಿನ ಅಮರಾವತಿಯನ್ನು ಶಾಸಕಾಂಗ ರಾಜಧಾನಿಯನ್ನಾಗಿ, ವಿಶಾಖಪಟ್ಟಣವನ್ನು ಕಾರ್ಯಾಂಗ ರಾಜಧಾನಿಯನ್ನಾಗಿ ಹಾಗೂ ಕರ್ನೂಲ್ ಅನ್ನು ನ್ಯಾಯಾಂಗ ರಾಜಧಾನಿಯನ್ನಾಗಿ ಮಾಡುವ ಉದ್ದೇಶ ಇದೆ. ಈ ಬಗ್ಗೆ ಗಂಭೀರ ಚಿಂತನೆ ನಡೆಸುವುದು ಅಗತ್ಯವಿದೆ’ ಎಂದರು.

‘ರಾಜಧಾನಿಗಳ ಕುರಿತು ರಚಿಸಿರುವ ತಜ್ಞರ ಸಮಿತಿ ನೀಡುವ ವರದಿ ಆಧರಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಕೆಲವೇ ದಿನಗಳಲ್ಲಿ ಈ ಸಮಿತಿ ವರದಿ ನೀಡುವ ನಿರೀಕ್ಷೆ ಇದೆ’ ಎಂದು ತಿಳಿಸಿದರು.

‘ಅಮರಾವತಿಯನ್ನು ಸಂಪೂರ್ಣ ರಾಜಧಾನಿಯನ್ನಾಗಿ ಅಭಿವೃದ್ಧಿಪಡಿಸಲು ₹1ಲಕ್ಷ ಕೋಟಿ ಅಗತ್ಯವಿದೆ. ಇಷ್ಟೊಂದು ಹಣ ಎಲ್ಲಿಂದ ಬರುತ್ತದೆ’ ಎಂದು ಅವರು ಪ್ರಶ್ನಿಸಿದರು.

ಸಚಿವಾಲಯ, ವಿವಿಧ ಇಲಾಖೆಗಳ ಮುಖ್ಯಸ್ಥರ ಕಚೇರಿಗಳನ್ನು ವಿಶಾಖಪಟ್ಟಣಕ್ಕೆ ಸ್ಥಳಾಂತರಿಸಲಾಗುವುದು ಎನ್ನುವ ಸುಳಿವನ್ನು ಅವರು ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.