ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಯೋತ್ಪಾದಕರಿಂದ ಗುಂಡಿನ ದಾಳಿ; ಮೂವರು ಪೊಲೀಸರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ನಡೆದ ಘಟನೆ
Last Updated 11 ಡಿಸೆಂಬರ್ 2018, 11:23 IST
ಅಕ್ಷರ ಗಾತ್ರ

ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ಶಂಕಿತ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಮೂವರು ಪೊಲೀಸರು ಹುತಾತ್ಮರಾಗಿದ್ದಾರೆ.

’ಇಲ್ಲಿನ ಝೈನ್‌ಪೋರಾದಲ್ಲಿ ಕಾವಲು ಕಾಯುತ್ತಿದ್ದ ನಾಲ್ವರು ಪೊಲೀಸರಿದ್ದರು. ಇಲ್ಲಿಗೆ ನುಗ್ಗಿದ ಭಯೋತ್ಪಾದಕರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.ಇದರಿಂದ ಮೂರು ಮಂದಿ ಪೊಲೀಸರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಮತ್ತೊಬ್ಬ ಪೊಲೀಸರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ‘ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಾಳಿ ಬಳಿಕ ಪೊಲೀಸರ ಬಳಿಯಿದ್ದ ಎಲ್ಲ ಶಸ್ತ್ರಾಸ್ತ್ರಗಳನ್ನು ಪೊಲೀಸರು ಹೊತ್ತೊಯ್ದಿದ್ದು, ಸ್ಥಳದಿಂದ ಪರಾರಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT