ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಸಿಬ್ಬಂದಿ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ನಾಲ್ಕು ಮಂದಿ ಉಗ್ರರು ಬಲಿಯಾಗಿದ್ದಾರೆ. ಇದೇ ಕಾರ್ಯಾಚರಣೆಯಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ಭದ್ರತಾ ಸಿಬ್ಬಂದಿ ಗುಂಡಿಗೆ ಬಲಿಯಾದವರು ಎಷ್ಕರ್ -ಎ–ತಯಬಾ ಉಗ್ರ ಸಂಘಟನೆಗೆ ಸೇರಿದವರು ಎನ್ನಲಾಗಿದೆ. ಪುಲ್ವಾಮಾದ ಲಸ್ಸಿಪೊರಾದಲ್ಲಿ ಉಗ್ರರರು ಅಡಿಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿ ಸೋಮವಾರ ಬೆಳಗಿನ ಜಾವ ಶೋಧ ಕಾರ್ಯಾಚರಣೆ ನಡೆಸಿದರು.
ಎಚ್ಚೆತ್ತ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದು, ಗುಂಡಿನ ಚಕಮಕಿಗೆ ಕಾರಣವಾಯಿತು. ಈ ವರೆಗೂ ಶೋಧ ಕಾರ್ಯಾಚರಣೆಯಲ್ಲಿ ನಾಲ್ಕು ಉಗ್ರರು ಮೃತಪಟ್ಟು ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ನಾಲ್ಕು ರೈಫಲ್‌ಗಳು ಹಾಗೂ ಇತರೆ ಶಸ್ತ್ರಾಸ್ತ್ರಗಳನ್ನು ಸ್ಥಳದಲ್ಲಿ ವಶಕ್ಕೆ ಪಡೆಯಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.