ಶನಿವಾರ, ಜೂಲೈ 4, 2020
28 °C

ತೆಲಂಗಾಣದಲ್ಲಿ ಕೊಳವೆಬಾವಿಗೆ ಬಿದ್ದ ಮೂರು ವರ್ಷದ ಬಾಲಕ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೇಡಕ್: ತೆಲಂಗಾಣದ ಮೇಡಕ್ ಜಿಲ್ಲೆಯಲ್ಲಿ ಬುಧವಾರ ಮೂರು ವರ್ಷದ ಬಾಲಕ ಆಕಸ್ಮಿಕವಾಗಿ 120 ಆಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದು,  ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. 

ಬಾಲಕನನ್ನು ಮೇಲೆತ್ತಲು ಕೊಳವೆ ಬಾವಿ ಸುತ್ತಲೂ ಮಣ್ಣು ಅಗೆಯಲಾಗುತ್ತಿದೆ.  ಈ ಕೆಲಸದಲ್ಲಿ ಎನ್‌ಡಿಆರ್‌ಎಫ್‌ ತಂಡವೂ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಕೊಳವೆಬಾವಿಯೊಳಗೆ ಆಕ್ಸಿಜನ್ ಪೂರೈಕೆ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ಮೇಡಕ್‌ ಪೊಲೀಸರು ತಿಳಿಸಿದ್ದಾರೆ. 

 ಇದನ್ನೂ ಓದಿ: ತೆಲಂಗಾಣ‌| ಕೊಳವೆಬಾವಿಗೆ ಬಿದ್ದಿದ್ದ 3 ವರ್ಷದ ಬಾಲಕ ಸಾವು 

ಬುಧವಾರ ಸಂಜೆ ತನ್ನ ಅಜ್ಜ ಮತ್ತು ಅಪ್ಪನೊಂದಿಗೆ ಹೊಲದಲ್ಲಿ ಓಡಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದಾನೆ. ಬಾಲಕನ ಕುಟುಂಬ ಇತ್ತೀಚೆಗಷ್ಟೇ ಹೊಲದಲ್ಲಿ ಮೂರು ಕೊಳವೆಬಾವಿಗಳನ್ನು ಕೊರೆಸಿತ್ತು. ಆದರೆ, ಒಂದರಲ್ಲಿಯೂ ನೀರು ಸಿಕ್ಕಿರಲಿಲ್ಲ. ವಿಫಲವಾದ ಕೊಳವೆಬಾವಿಗಳನ್ನು ಮುಚ್ಚದೇ ಇದ್ದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು