ಬುಧವಾರ, ಜನವರಿ 22, 2020
22 °C

ಶಿವಸೇನಾದ 35 ಶಾಸಕರಿಗೆ ಅಸಮಾಧಾನ, ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ: ರಾಣೆ ವಿಶ್ವಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಥೇನ್: ಶಿವಸೇನಾದ 56 ಶಾಸಕರಲ್ಲಿ 35 ಶಾಸಕರು ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ಹೇಳಿದ್ದಾರೆ. 

ಸದ್ಯ ರಾಜ್ಯಸಭಾ ಸದಸ್ಯರಾಗಿರುವ ರಾಣೆ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವು ಕಾರ್ಯನಿರ್ವಹಿಸದ ಸರ್ಕಾರ. ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ರಾಜ್ಯದಲ್ಲಿ ಸರ್ಕಾರ ರಚಿಸಲು ಐದು ವಾರಗಳಿಗಿಂತ ಹೆಚ್ಚು ಸಮಯ ತೆಗೆದುಕೊಂಡಿವೆ. ಇಂತಹ ಸರ್ಕಾರದಿಂದ ನಾವು ಏನನ್ನು ನಿರೀಕ್ಷಿಸಲು ಸಾಧ್ಯ? ಸರ್ಕಾರ ನಡೆಸುವ ಕುರಿತು ಅವರಿಗೆ ಏನೊಂದು ತಿಳಿದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಯು ಮತ್ತೆ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದೇ ಬರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಬಿಜೆಪಿಯು 105 ಶಾಸಕರನ್ನು ಹೊಂದಿದೆ. ಶಿವಸೇನಾ ಕೇವಲ 56 ಶಾಸಕರನ್ನು ಹೊಂದಿದ್ದರೂ ಅದರಲ್ಲಿ 35 ಶಾಸಕರಿಗೆ ಅಸಮಾಧಾನವಿದೆ ಎಂದು ದೂರಿದರು.

ರೈತರ ಸಾಲಮನ್ನಾ ಮಾಡುವ ಮಹಾರಾಷ್ಟ್ರ ಸರ್ಕಾರದ ಭರವಸೆ 'ಟೊಳ್ಳಾಗಿದೆ' ಏಕೆಂದರೆ ಅದು ಯಾವಾಗ ಜಾರಿಗೆ ಬರಲಿದೆ ಎಂಬುದರ ಬಗ್ಗೆ ಸೂಕ್ತ ಸಮಯವನ್ನು ನಿಗದಿ ಮಾಡಿಲ್ಲ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಔರಂಗಾಬಾದ್‌ಗೆ ಗುರುವಾರ ಭೇಟಿ ನೀಡಿದ್ದನ್ನು ಉಲ್ಲೇಖಿಸಿದ ರಾಣೆ, ಯಾವುದೇ ಯೋಜನೆಗಳನ್ನು ಘೋಷಿಸದೆ ಅಥವಾ ಈ ಪ್ರದೇಶಕ್ಕೆ ಯಾವುದೇ ಹಣವನ್ನು ನೀಡದೆ ವಾಪಸ್ಸಾಗಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿ ಮತ್ತು ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನಾ(ಎಂಎನ್‌ಎಸ್) ಮೈತ್ರಿ ಕುರಿತಂತೆ ಮಾತನಾಡಲು ನಿರಾಕರಿಸಿದ ಅವರು, ಈ ಕುರಿತು ಬಿಜೆಪಿ ಅಧ್ಯಕ್ಷರು ಮಾತನಾಡುತ್ತಾರೆ ಎಂದು ಹೇಳಿದರು. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು