ಜಮ್ಮು–ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರು ಸಾವು

ಭಾನುವಾರ, ಮಾರ್ಚ್ 24, 2019
27 °C

ಜಮ್ಮು–ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರು ಸಾವು

Published:
Updated:

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಭಾನುವಾರ ಉಗ್ರರ ವಿರುದ್ಧ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ಉಗ್ರರು ಮತ್ತು ಭದ್ರತಾ ಸಿಬ್ಬಂದಿ ನಡುವಿನ ಗುಂಡಿನ ಚಕಮಕಿಯಲ್ಲಿ ಒಬ್ಬ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಸಾವು, ನೋವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಸ್ಥಳೀಯ ಪೊಲೀಸರು ಶಂಕಿಸಲಾಗಿದೆ.

ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಹಂಡ್ವಾರಾ ಬಳಿಯ ಬಾಬಾಗುಂದ್ ಪ್ರದೇಶದ ಮನೆಯೊಂದರಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ಪಡೆದು ಭದ್ರತಾ ಪಡೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಪಾಕಿಸ್ತಾನ ಕಳೆದ 60 ಗಂಟೆಗಳಲ್ಲಿ ಕಾಶ್ಮೀರದ ಪೂಂಚ್, ರಜೌರಿ, ಕುಪ್ವಾರ ಜಿಲ್ಲೆಗಳಲ್ಲಿ ನಿರಂತರವಾಗಿ ಶೆಲ್ ದಾಳಿ ನಡೆಸುತ್ತಿದೆ.  

ನೌಶೆರಾ ವಲಯದಲ್ಲಿ ಶನಿವಾರ ಮಧ್ಯಾಹ್ನ ಪಾಕಿಸ್ತಾನ ನಡೆಸಿದ ಶೆಲ್‌ ದಾಳಿಯಲ್ಲಿ ಮಹಿಳೆ ಮತ್ತು ಆಕೆಯ ಮಕ್ಕಳಿಬ್ಬರು ಬಲಿಯಾಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಸೇರಿದಂತೆ ಅನೇಕ ನಾಗರಿಕರು ಗಾಯಗೊಂಡಿದ್ದರು.

ನಾಗರಿಕರು ಬಂಕರ್‌ಗಳಲ್ಲಿ (ನೆಲಮಾಳಿಗೆ) ಮತ್ತು ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಗಡಿಯಲ್ಲಿರುವ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ... ನಿಲ್ಲದ ಪಾಕ್‌ ತಂಟೆ: ನಿರಂತರ ಶೆಲ್‌ ದಾಳಿಗೆ ತಾಯಿ–ಮಕ್ಕಳು ಸೇರಿ ಮೂರು ಬಲಿ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 7

  Sad
 • 0

  Frustrated
 • 1

  Angry

Comments:

0 comments

Write the first review for this !