ಶುಕ್ರವಾರ, ಡಿಸೆಂಬರ್ 6, 2019
17 °C

ಶ್ರೀನಗರ: ಭಾರಿ ಹಿಮಪಾತ, ನಾಲ್ವರು ಸೈನಿಕರ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: ದಕ್ಷಿಣ ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಭಾರಿ ಹಿಮಪಾತ ಸಂಭವಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಬುಧವಾರ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ. 

ಕುಪ್ವಾರಾ ಜಿಲ್ಲೆಯ ತಂಗ್ಧರ್ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದ ಹಿಮಪಾತದಲ್ಲಿ ನಾಲ್ವರು ಸೈನಿಕರು ಸಿಲುಕಿದ್ದರು. ಅದರಲ್ಲಿ ಮೂವರು ಸೈನಿಕರು ಸಾವನ್ನಪ್ಪಿದ್ದು, ಒಬ್ಬ ಸೈನಿಕನನ್ನು ರಕ್ಷಿಸಲಾಗಿದೆ ಎಂದು  ಅವರು ಮಾಹಿತಿ ನೀಡಿದ್ದಾರೆ. 

ಮತ್ತೊಂದು ಪ್ರಕರಣದಲ್ಲಿ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ದವಾರ್ ಪ್ರದೇಶದಲ್ಲಿ ಸಂಭವಿಸಿದ್ದ ಹಿಮಪಾತದಲ್ಲಿ ಇಬ್ಬರು ಸೈನಿಕರು ಸಿಲುಕಿಕೊಂಡಿದ್ದರು. ಶೋಧ ಕಾರ್ಯಾಚರಣೆಯಲ್ಲಿ ಒಬ್ಬ ಸೈನಿಕನ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬ ಸೈನಿಕನನ್ನು ಜೀವಂತವಾಗಿ ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು