ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಜತೆಗೆ 4 ರಾಜ್ಯಗಳಲ್ಲೂ ಚುನಾವಣೆ?

Last Updated 3 ಡಿಸೆಂಬರ್ 2018, 20:00 IST
ಅಕ್ಷರ ಗಾತ್ರ

ನವದೆಹಲಿ: ಆಂಧ್ರ ಪ್ರದೇಶ, ಒಡಿಶಾ, ಸಿಕ್ಕಿಂ ಹಾಗೂ ಅರುಣಾಚಲ ಪ್ರದೇಶ ವಿಧಾನಸಭೆಗಳ ಚುನಾವಣೆಯನ್ನು ಲೋಕಸಭೆ ಚುನಾವಣೆ ಜೊತೆಗೆ ನಡೆಸುವ ಸಾಧ್ಯತೆ ಇದೆ ಎಂದು ಚುನಾವಣಾ ಆಯೋಗದ ಉನ್ನತ ಮೂಲಗಳು ತಿಳಿಸಿವೆ.

ಸಿಕ್ಕಿಂ ವಿಧಾನಸಭೆ ಅವಧಿ 2019ರ ಮೇ 27, ಆಂಧ್ರಪ್ರದೇಶ ರಾಜ್ಯದ್ದು ಜೂನ್‌ 18, ಒಡಿಶಾ ರಾಜ್ಯದ್ದು ಜೂನ್‌ 11 ಹಾಗೂ ಅರುಣಾಚಲ ಪ್ರದೇಶ ವಿಧಾನಸಭೆ ಅವಧಿ ಜೂನ್‌ 1ಕ್ಕೆ ಮುಗಿಯಲಿದೆ.

ಹೀಗಾಗಿ ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆ ಜೊತೆಗೆ ಈ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಸುವ ಸಾಧ್ಯತೆ ಹೆಚ್ಚಿದೆ. ಕಳೆದ ತಿಂಗಳು ವಿಸರ್ಜನೆಗೊಂಡ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ಸಹ ಸಾರ್ವತ್ರಿಕ ಚುನಾವಣೆ ಜೊತೆಗೆ ನಡೆಯಬಹುದು ಎಂದು ಮೂಲಗಳು ಹೇಳಿವೆ.

‘ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಆರು ತಿಂಗಳೊಳಗೆ ಚುನಾವಣೆ ನಡೆಸಬೇಕಾಗುತ್ತದೆ. ಆದ್ದರಿಂದ ಲೋಕಸಭೆ ಚುನಾವಣೆ ಜೊತೆಗೆ ನಡೆಸಬಹುದು. ಇಲ್ಲವೆ ಅದಕ್ಕೆ ಮುನ್ನವೇ ನಡೆಯಬಹುದು. ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆಯಾ ರಾಜ್ಯಗಳಲ್ಲಿ ಲೋಕಸಭೆ ಚುನಾವಣೆಗೆ ಭದ್ರತಾ ಪಡೆಗಳನ್ನು ನಿಯೋಜಿಸಲಾಗುತ್ತದೆ. ಭದ್ರತೆ ದೃಷ್ಟಿಯಿಂದ ಏಕಕಾಲಕ್ಕೆ ಚುನಾವಣೆ ನಡೆದರೆ ಚುನಾವಣಾಧಿಕಾರಿಗಳಿಗೆ ಅನುಕೂಲವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಸರ್ಕಾರ ಇರುವ ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನಸಭೆ ಅವಧಿ 2019ರ ನವೆಂಬರ್‌ ತಿಂಗಳಿಗೆ ಮುಗಿಯಲಿದೆ. ಈ ಎರಡೂ ರಾಜ್ಯಗಳು ಲೋಕಸಭೆ ಚುನಾವಣೆ ಜೊತೆಗೆ ವಿಧಾನಸಭೆ ಚುನಾವಣೆಗೆ ಮುಂದಾದರೆ ಈ ರಾಜ್ಯಗಳಲ್ಲಿಯೂ ವಿಧಾನಸಭೆ ಚುನಾವಣೆ ನಡೆಸಬೇಕಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT