ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ಕು ಸಾವಿರ ಗ್ರಾಮಗಳು ಬಯಲು ಶೌಚ ಮುಕ್ತ

ಸ್ವಚ್ಛ ಭಾರತ್‌ ಮಿಷನ್‌: ಶೌಚಾಲಯ ನಿರ್ಮಾಣದಲ್ಲಿ ಶೇ 93
Last Updated 3 ಫೆಬ್ರುವರಿ 2019, 19:56 IST
ಅಕ್ಷರ ಗಾತ್ರ

ನವದೆಹಲಿ: ಸ್ವಚ್ಛ ಭಾರತ ಅಭಿಯಾನದಡಿ ದೇಶದಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ನಗರಗಳನ್ನು ಬಯಲು ಶೌಚ ಮುಕ್ತಗೊಳಿಸಲಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯ ತಿಳಿಸಿದೆ.

ಮುಂದಿನ ತಿಂಗಳೊಳಗೆ ದೇಶದ ಎಲ್ಲ ನಗರಗಳನ್ನು ಬಯಲು ಶೌಚಮುಕ್ತ ನಗರಗಳು ಎಂದು ಘೋಷಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

‘62.42 ಲಕ್ಷ ವೈಯಕ್ತಿಕ ಶೌಚಾಲಯಗಳನ್ನು ಕಟ್ಟುವ ಗುರಿ ಹೊಂದಲಾಗಿತ್ತು. ಇದರಲ್ಲಿ ಶೇ 93ರಷ್ಟು ಶೌಚಾಲಯಗಳನ್ನು ಈಗಾಗಲೇ ನಿರ್ಮಿಸಲಾಗಿದೆ. ಐದು ಲಕ್ಷ ಸಾರ್ವಜನಿಕ ಶೌಚಾಲಯಗಳನ್ನು ಕಟ್ಟುವ ಮೂಲಕ ಶೇ 100ರಷ್ಟು ಗುರಿ ಸಾಧಿಸಲಾಗಿದೆ’ ಎಂದು ತಿಳಿಸಿದ್ದಾರೆ.

ದೇಶದಲ್ಲಿನ 84,229 ವಾರ್ಡ್‌ಗಳ ಪೈಕಿ 72, 503 ವಾರ್ಡ್‌ಗಳಲ್ಲಿ ಮನೆ ಮನೆಗೆ ತೆರಳಿ ಘನ ತ್ಯಾಜ್ಯ ಸಂಗ್ರಹಿಸುವ ವ್ಯವಸ್ಥೆ ಮಾಡಲಾಗಿದ್ದು, ಈ ಕಾರ್ಯದಲ್ಲಿ ಶೇ 86ರಷ್ಟು ಗುರಿ ಸಾಧಿಸಲಾಗಿದೆ.

ಕಸದ ವೈಜ್ಞಾನಿಕ ವಿಲೇವಾರಿಯಲ್ಲಿ ಶೇ 50ರಷ್ಟು ಗುರಿ ಸಾಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

**

ಅಂಕಿ–ಅಂಶ

4,378 - ದೇಶದಲ್ಲಿರುವ ಒಟ್ಟು ನಗರಗಳ ಸಂಖ್ಯೆ

4,140 - ಬಯಲು ಶೌಚಮುಕ್ತ ನಗರಗಳ ಸಂಖ್ಯೆ

9 ಕೋಟಿ - ಸ್ವಚ್ಛ ಭಾರತ ಮಿಷನ್‌ ಅಡಿ ನಿರ್ಮಿಸಲಾಗಿರುವ ಶೌಚಾಲಯಗಳು

ಶೇ 98 - ಗ್ರಾಮೀಣ ನೈರ್ಮಲೀಕರಣದಲ್ಲಿ ಆಗಿರುವ ಪ್ರಗತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT