ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಅಗ್ನಿ ದುರಂತ ಪ್ರಕರಣ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ ಘೋಷಣೆ 

Last Updated 8 ಡಿಸೆಂಬರ್ 2019, 7:47 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಾಜ್‌ ಮಂಡಿ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಅಗ್ನಿ ದುರಂತದ ಬಗ್ಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಳವಳ ವ್ಯಕ್ತಪಡಿಸಿದ್ದಾರೆ.

ಅವಘಡದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ₹10 ಲಕ್ಷಹಾಗೂ ಗಾಯಾಳುಗಳ ಚಿಕಿತ್ಸೆಗೆ₹1 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರುಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಜೊತೆಗೆ, ಎಲ್‌ಎನ್‌ಜೆಪಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯವಿಚಾರಿಸಿದರು.

ದುರದೃಷ್ಟಕರ ಘಟನೆ
‘ಇದು ಅತ್ಯಂತ ದುರದೃಷ್ಟಕರ ಘಟನೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು,ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ’ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಟ್ವೀಟ್​ ಮಾಡಿದ್ದಾರೆ.

ಪಿಎಂಎನ್‌ಆರ್‌ಎಫ್‌ ನೆರವು
ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ನಿಧಿಯಿಂದ (ಪಿಎಂಎನ್‌ಆರ್‌ಎಫ್‌) ₹2 ಲಕ್ಷ ಪರಿಹಾರ ಹಾಗೂ ಗಾಯಾಳುಗಳ ಚಿಕಿತ್ಸೆಗೆ₹50 ಸಾವಿರ ಪರಿಹಾರ ನೀಡುವುದಾಗಿ ಪ್ರಧಾನಿ ಕಾರ್ಯಾಲಯ ತಿಳಿಸಿದೆ.

ಕಾರ್ಖಾನೆ ಮಾಲೀಕರ ವಿರುದ್ಧ ದೂರು
ಪ್ರಕರಣ ಸಂಬಂಧಿಸಿದ ಕಾರ್ಖಾನೆ ಮಾಲೀಕರ ವಿರುದ್ಧ ಐಪಿಸಿ 304ರ ಅಡಿಯಲ್ಲಿ ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT