ಶುಕ್ರವಾರ, ಜೂಲೈ 3, 2020
23 °C

ಭಾರತ- ಬಾಂಗ್ಲಾದೇಶ ಗಡಿಭಾಗದಲ್ಲಿ 4.3 ತೀವ್ರತೆಯ ಭೂಕಂಪ

ಪಿಟಿಐ Updated:

ಅಕ್ಷರ ಗಾತ್ರ : | |

earthquake

ಚಿರಾಪುಂಜಿ: ಭಾರತ- ಬಾಂಗ್ಲಾದೇಶ ಗಡಿಭಾಗದಲ್ಲಿ ಬುಧವಾರ ಬೆಳಗ್ಗೆ 4.3 ತೀವ್ರತೆಯ ಭೂಕಂಪ ಸಂಭವಿಸಿದ್ದು. ಯಾವುದೇ ಸಾವು-ನೋವು ವರದಿಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬೆಳಗ್ಗೆ 7.10ಕ್ಕೆ ಭೂಕಂಪ ಸಂಭವಿಸಿದ್ದು, ಸೊಹ್ರಾದ ಆಗ್ನೇಯ ಭಾಗದಲ್ಲಿ 55ಕಿಮೀ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಇದೆ ಎಂದು ಪ್ರಾದೇಶಿಕ ಭೂಕಂಪಶಾಸ್ತ್ರ ಕೇಂದ್ರ ಹೇಳಿದೆ.

ಮೇಘಾಲಯದಲ್ಲಿ ಭೂಮಿ ಕಂಪಿಸಿದ ಅನುಭವುಂಟಾಗಿದ್ದು ಅಲ್ಲಿಯೂ ಯಾವುದೇ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು