ಉತ್ತರಾಖಂಡದಲ್ಲಿ ಕಮರಿಗೆ ಉರುಳಿದ ಬಸ್‌: 47 ಮಂದಿ ಸಾವು

7

ಉತ್ತರಾಖಂಡದಲ್ಲಿ ಕಮರಿಗೆ ಉರುಳಿದ ಬಸ್‌: 47 ಮಂದಿ ಸಾವು

Published:
Updated:
700 ಅಡಿ ಆಳದ ಕಮರಿಗೆ ಉರುಳಿದ ಬಸ್‌ 

ನೈನೀಡಾಂಡಾ(ಉತ್ತರಾಖಂಡ): ಬಸ್‌ ಕಮರಿಗೆ ಉರುಳಿ 47 ಪ್ರಯಾಣಿಕರು ಸಾವಿಗೀಡಾಗಿರುವ ಘಟನೆ ಉತ್ತರಾಖಂಡದ ಫೌಡಿ ಗಡವಾಲ್‌ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. 

ನೈನೀಡಾಂಡಾ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಸುಮಾರು 80 ಮೀಟರ್‌ ಆಳದ ಕಮರಿಗೆ ಬಿದ್ದ ರಭಸಕ್ಕೆ ಬಸ್‌ ತುಂಡಾಗಿದ್ದು, ಸಾವಿನ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. 11 ಜನರಿಗೆ ಗಂಭೀರ ಗಾಯಗಳಾಗಿವೆ. 

28 ಸೀಟರ್‌ ಮಿನಿ ಬಸ್‌ನಲ್ಲಿ ಒಟ್ಟು 58 ಪ್ರಯಾಣಿಕರು ರಾಮ್‌ನಗರದ ಕಡೆಗೆ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ಗಡವಾಲ್‌ನ ಕಮಿಷನರ್‌ ದಿಲಿಪ್‌ ಜವಾಲ್ಕರ್‌ ತಿಳಿಸಿದ್ದಾರೆ. 

ಸಾಮರ್ಥ್ಯಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿ ಜನರು ಪ್ರಯಾಣಿಸುತ್ತಿದ್ದುದು ಅಪಘಾತದ ತೀವ್ರತೆ ಹೆಚ್ಚಲು ಕಾರಣ ಎನ್ನಲಾಗುತ್ತಿದೆ. ಉತ್ತರಾಖಂಡ ಸರ್ಕಾರ ಮೃತರ ಕುಟುಂಬಕ್ಕೆ ₹2 ಲಕ್ಷ ಹಾಗೂ ಗಾಯಗೊಂಡವರಿಗೆ ₹50 ಸಾವಿರ ಪರಿಹಾರ ಘೋಷಿಸಿದೆ. 

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್‌, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. 
 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 3

  Sad
 • 1

  Frustrated
 • 0

  Angry

Comments:

0 comments

Write the first review for this !