ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ 46 ಡಿಗ್ರಿ ಸೆಲ್ಸಿಯಸ್‌ ತಾಪಮಾನ: ಬಿಸಿಗಾಳಿಗೆ ಉತ್ತರ ಭಾರತ ತತ್ತರ

Last Updated 24 ಮೇ 2020, 14:45 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ಭೀತಿಯಿಂದ ತತ್ತರಿಸಿ ಕಳೆದ ಎರಡು ತಿಂಗಳಿಂದ ಮನೆಗಳಲ್ಲೇ ಬಂಧಿಯಾಗಿರುವ ದೆಹಲಿಯ ಜನತೆಗೆ ಕಳೆದ ಮೂರು ದಿನಗಳಿಂದ ಬೀಸುತ್ತಿರುವ ಬಿಸಿಗಾಳಿ ಮತ್ತಷ್ಟು ಆತಂಕ ಹೆಚ್ಚಿಸಿದೆ.

ಕಳೆದ ಗುರುವಾರದಿಂದ ಸತತ ಮೂರು ದಿನಗಳ ಕಾಲ 42ರಿಂದ 44 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಿದ್ದ ತಾಪಮಾನ, ಭಾನುವಾರ 46 ಡಿಗ್ರಿ ಸೆಲ್ಸಿಯಸ್‌ ತಲುಪಿದೆ. ಇದು ಪ್ರಸಕ್ತ ಬೇಸಿಗೆಯ ಗರಿಷ್ಠ ತಾಪಮಾನವಾಗಿದೆ.

ಕಳೆದ ವಾರವಷ್ಟೇ ಸರ್ಕಾರ ಲಾಕ್‌ಡೌನ್‌ ಸಡಿಲಿಕೆ ಮಾಡಿದ್ದರಿಂದ ಹರ್ಷಚಿತ್ತರರಾಗಿ, ಮನೆಗಳಿಂದ ಹೊರಹೋಗಿ ಮತ್ತೆ ಕೆಲಸ– ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು ಎಂದುಕೊಂಡಿದ್ದ ಜನತೆಗೆ ಬಿಸಿಲಿನ ಬೇಗೆ ಮನೆಯಲ್ಲೇ ಮಾಡಿದೆ.

ದೆಹಲಿ ಮಾತ್ರವಲ್ಲದೆ ಹರಿಯಾಣ, ಪಂಜಾಬ್, ರಾಜಸ್ಥಾನ ಸೇರಿದಂತೆ ಸುತ್ತಮುತ್ತಲಿನ ಅನೇಕ ರಾಜ್ಯಗಳಲ್ಲಿ ಬಿಸಿಲಿನ ಬೇಗೆ ಹೆಚ್ಚುತ್ತ ಸಾಗಿದೆ.

ಮುಂದಿನ ವಾರಾಂತ್ಯದದವರೆಗೂ ಬಿಸಿಲಿನ ತಾಪ ಮುಂದುವರಿಯುವ ಸಾಧ್ಯತೆ ಇದೆ. ಜನರು ಬೆಳಿಗ್ಗೆ 10ರಿಂದ ಮಧ್ಯಾಹ್ನ 4ರವರೆಗೆ ಮನೆಗಳಿಂದ ಹೊರಬರಬಾರದು ಎಂದು ಭಾರತೀಯ ಹವಾಮಾನ ಇಲಾಖೆಯ ಪ್ರಾದೇಶಿಕ ಮುನ್ಸೂಚನೆ ಕೇಂದ್ರದ ಮುಖ್ಯಸ್ಥ ಕುಲದೀಪ್ ಶ್ರೀವಾತ್ಸವ ಎಚ್ಚರಿಸಿದ್ದಾರೆ.

ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್‌, ವಿದರ್ಭ, ಛತ್ತೀಸ್‌ಗಢ, ಬಿಹಾರ ಹಾಗೂ ದಕ್ಷಿಣದ ತೆಲಂಗಾಣ ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲೂ ತಾಪಮಾನದಲ್ಲಿ ಭಾರಿ ಏರಿಕೆ ಕಂಡುಬರಲಿದ್ದು, ಬಿಸಿ ಗಾಳಿ ಬೀಸಲಿದೆ ಎಂದು ಅವರು ತಿಳಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT