ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯ ಬಹುಮಹಡಿ ಕಟ್ಟಡದಲ್ಲಿ ಬೆಂಕಿ: 5 ಸಾವು, 11 ಜನರಿಗೆ ಗಾಯ

Last Updated 6 ಆಗಸ್ಟ್ 2019, 2:15 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 5 ಜನರು ಮೃತಪಟ್ಟಿದ್ದು 11ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಝಾಕೀರ್‌ ನಗರದಲ್ಲಿನ ಬಹುಮಹಡಿ ಕಟ್ಟಡದಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 5 ಮಂದಿಸಜೀವವಾಗಿ ದಹನಗೊಂಡಿದ್ದಾರೆ. 11ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 20 ಜನರನ್ನು ರಕ್ಷಣೆ ಮಾಡಲಾಗಿದೆಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರುಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT