ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ: ಕಾಲುವೆಗೆ ಬಿದ್ದ ಬಸ್; 5 ಮಂದಿ ಸಾವು

Last Updated 16 ಅಕ್ಟೋಬರ್ 2018, 12:42 IST
ಅಕ್ಷರ ಗಾತ್ರ

ಹೂಗ್ಲಿ/ಪಶ್ಚಿಮ ಬಂಗಾಳ: ಇಲ್ಲಿರುವ ಹರಿಪಾಲ್‌ ಸೇತುವೆಮೇಲಿಂದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಪರಿಣಾಮ 5 ಮಂದಿ ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

ಕೊಲ್ಕತ್ತದ ಕಡೆಗೆ ತೆರಳುತ್ತಿದ್ದ ಬಸ್ ಹೂಗ್ಲಿಯ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದಖಾತಿಯ ಕಾಲ್ ಎಂಬ ಕಾಲುವೆಗೆ ಬಿದ್ದು ಅನಾಹುತ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ಸುಖೇಶ್ ಜೈನ್ ಹೇಳಿದ್ದಾರೆ.

ಗಾಯಗೊಂಡ 20 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದರಲ್ಲಿ ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ.

ರಾಜ್ಯ ವಿಪತ್ತು ನಿರ್ವಹಣಾ ಪಡೆ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT