ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘5ಜಿ’: ಭದ್ರತೆ ಪರಿಶೀಲನೆ ಬಳಿಕ ‘ಹುವೈ’ಗೆ ಅವಕಾಶ

Last Updated 23 ಮಾರ್ಚ್ 2019, 18:23 IST
ಅಕ್ಷರ ಗಾತ್ರ

ನವದೆಹಲಿ: ಭದ್ರತೆಗೆ ಸಂಬಂಧಿಸಿದ ಎಲ್ಲ ವಿಷಯಗಳನ್ನು ಪರಾಮರ್ಶಿಸಿದ ಬಳಿಕವೇ ದೇಶದಲ್ಲಿ ‘5ಜಿ’ ತಂತ್ರಜ್ಞಾನ ಅನುಷ್ಠಾನಗೊಳಿಸಲು ಚೀನಾ ಕಂಪನಿಗಳಿಗೆ ಅವಕಾಶ ನೀಡಲಾಗುವುದು ಎಂದು ದೂರಸಂಪರ್ಕ ಇಲಾಖೆ ತಿಳಿಸಿದೆ.

ಚೀನಾದ ದೂರಸಂಪರ್ಕ ಕಂಪನಿಗಳ ಬಗ್ಗೆ ಹಲವು ದೇಶಗಳು ಅನುಮಾನ ವ್ಯಕ್ತಪಡಿಸಿರುವುದರಿಂದ ಕೇಂದ್ರ ಸರ್ಕಾರ ಈ ಕ್ರಮಕೈಗೊಳ್ಳಲಿದೆ.

ಚೀನಾದ ‘ಹುವೈ’ ಕಂಪನಿ ‘5ಜಿ ’ಪ್ರಯೋಗಗಳಲ್ಲಿ ಅವಕಾಶ ನೀಡಬೇಕು ಎಂದು ಸರ್ಕಾರವನ್ನು ಕೋರಿತ್ತು. ದೂರ ಸಂಪರ್ಕ ಇಲಾಖೆ ಇದಕ್ಕಾಗಿ ತಜ್ಞರ ಸಮಿತಿಯನ್ನು ರಚಿಸಿದೆ. ತರಂಗಾಂತರಗಳು, ಸ್ಥಳ ಇತ್ಯಾದಿ ಅಂಶಗಳ ಬಗ್ಗೆ ಸಮಿತಿ ಪರಿಶೀಲನೆ ನಡೆಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT