ಕಾಶ್ಮೀರ: ಐವರು ಯೋಧರು ಹುತಾತ್ಮ, ಐವರು ಉಗ್ರರ ಹತ್ಯೆ

ಶ್ರೀನಗರ: ಗಡಿಯಲ್ಲಿ ಒಳನುಸುಳಲು ಮುಂದಾಗಿದ್ದ ಉಗ್ರರ ಯತ್ನವನ್ನು ಸೇನಾಪಡೆ ಯೋಧರು ವಿಫಲಗೊಳಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಐವರು ಉಗ್ರರು ಹಾಗೂ ಮೂವರು ಯೋಧರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡ ಇಬ್ಬರು ಯೋಧರನ್ನು ಪ್ರತಿಕೂಲ ಹವಾಮಾನದ ಕಾರಣ ಆಸ್ಪತ್ರೆಗೆ ಸಾಗಿಸಲಾಗದೆ ಅಸುನೀಗಿದ್ದಾರೆ.
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಕೆರನ್ ವಲಯದಲ್ಲಿ ಭಾನುವಾರ ಉಗ್ರರ ಗುಂಪು ಒಳ ನುಸುಳುವ ಯತ್ನ ನಡೆಸಿತು. ತಕ್ಷಣ ಕಾರ್ಯಪ್ರವೃತರಾದ ಭದ್ರತಾ ಪಡೆಯು ಗುಂಡಿನ ದಾಳಿ ನಡೆಸಿದೆ ಎಂದು ರಕ್ಷಣಾ ಇಲಾಖೆ ವಕ್ತಾರ ಕರ್ನಲ್ ರಾಜೇಶ್ ಕಲೈ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅಡಗಿರುವ ಸಾಧ್ಯತೆ ಇದ್ದು,ಭಾರಿ ಹಿಮ ಬೀಳುತ್ತಿರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.