ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗಾಗಿ 59 ನಿಮಿಷದಲ್ಲಿ ಸಾಲ ಮಂಜೂರು ಯೋಜನೆ

ನವದೆಹಲಿ: ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಸಹಾಯವಾಗುವ 59 ನಿಮಿಷದಲ್ಲಿ ಸಾಲ ಮಂಜೂರು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಚಾಲನೆ ನೀಡಿದ್ದಾರೆ.
ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮಗಳಿಗೆ ಪ್ರೋತ್ಸಾಹ ನೀಡುವ ಕೇಂದ್ರ ಸರ್ಕಾರದ ಯೋಜನೆಯ ಅಂಗವಾಗಿ 59 ನಿಮಿಷದಲ್ಲಿ ಸಾಲ ಪೋರ್ಟಲ್ ನ್ನು ವಿಗ್ಯಾನ್ ಭವನ್ನಲ್ಲಿ ಮೋದಿ ಅನಾವರಣಗೊಳಿಸಿದ್ದಾರೆ.
59 ನಿಮಿಷಗಳ ಸಾಲ ಮಂಜೂರು ಪೋರ್ಟಲ್ನ್ನು ನಾನು ನಿಮಗೆ ಸಮರ್ಪಿಸುತ್ತಿದ್ದೇನೆ. ಇದು ಈಗಾಗಲೇ ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮಿಗಳಿಗೆ ವರದಾನವಾಗಿದೆ ಎಂದಿದ್ದಾರೆ ಮೋದಿ. ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮ ವಲಯಕ್ಕಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ 12 ಪ್ರಮುಖ ಯೋಜನೆಗಳ ಬಗ್ಗೆ ಮಾತನಾಡಿದ ಮೋದಿ, ಸರಿಯಾದ ನಿರ್ಧಾರಗಳ ಮೂಲಕ ಜವಾಬ್ದಾರಿಯನ್ನು ನಿಭಾಯಿಸಲಾಗುತ್ತದೆ. ನಿರ್ಧಾರ ಸರಿಯಾಗಿದ್ದರೆ ಅದರ ಪರಿಣಾಮವೂ ಉತ್ತಮವಾಗಿರುತ್ತದೆ ಎಂದಿದ್ದಾರೆ.
ಇತ್ತೀಚಿಗಿನ ವರ್ಷಗಳಲ್ಲಿ ಸರ್ಕಾರ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯಗಳಿಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಈ ಯೋಜನೆ ಮುಂದಿನ 100 ದಿನಗಳ ಕಾಲ ನಡೆಯಲಿದ್ದು, ದೇಶದಾದ್ಯಂತವಿರುವ ಜನರಿಗೆ ಉಪಯೋಗವಾಗುವಂತೆ ಮಾಡಲಾಗುವುದು ಎಂದು ಮೋದಿ ಹೇಳಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.