ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುಬೈನಿಂದ ಬೆಂಗಳೂರಿಗೆ ಕರೆತರಲಾದ 195 ಜನರ ಪೈಕಿ 6 ಮಂದಿಯಲ್ಲಿ ಕೋವಿಡ್‌ 19 ಲಕ್ಷಣ

Last Updated 22 ಮಾರ್ಚ್ 2020, 7:34 IST
ಅಕ್ಷರ ಗಾತ್ರ

ಬೆಂಗಳೂರು: ದುಬೈನಿಂದ ಬೆಂಗಳೂರಿಗೆ ಭಾನುವಾರ ಕರೆತರಲಾದ 195 ಕನ್ನಡಿಗ ಪೈಕಿ 6 ಮಂದಿಯಲ್ಲಿ ಕೋವಿಡ್‌ 19 ರೋಗದ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಇಂದು ದುಬೈನಲ್ಲಿದ್ದ 195 ಕನ್ನಡಿಗರನ್ನು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ಇವರಲ್ಲಿ 6 ಜನರಿಗೆ ಕೋವಿಡ್‌ 19 ಲಕ್ಷಣಗಳಿವೆ. ಆದ್ದರಿಂದ ಅವರನ್ನು ಬೆಂಗಳೂರಿನ ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆಯ ಪ್ರತ್ಯೇಕಿಸಲ್ಪಟ್ಟ ಕೇಂದ್ರದಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಉಳಿದ ಪ್ರಯಾಣಿಕರನ್ನು, ಬೆಂಗಳೂರಿನ ಆಕಾಶ್ ವೈದ್ಯಕೀಯ ಸಂಸ್ಥೆಯ ಪ್ರತ್ಯೇಕಿಸಲ್ಪಟ್ಟ ವಾರ್ಡಿನಲ್ಲಿ ಸೇರಿಸಿ ನಿಗಾವಹಿಸಲಾಗಿದೆ,’ ಎಂದು ಅವರು ತಿಳಿಸಿದ್ದಾರೆ.

ಇನ್ನು ಇಂದು ಜಾರಿಯಾಲ್ಲಿರುವ ಜನತಾ ಕರ್ಫ್ಯೂ ಹಿನ್ನೆಯಲ್ಲಿ ಶ್ರೀರಾಮುಲು ಅವರು ಮನೆಯಿಂದಲೇ ಎಲ್ಲ ಕೆಲಸಗಳನ್ನೂ ನಿರ್ವಹಿಸಿದರು. ಈ ವಿಷಯವನ್ನೂ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT