ಶುಕ್ರವಾರ, ಏಪ್ರಿಲ್ 3, 2020
19 °C

ಭಷ್ಟಾಚಾರ ಆರೋಪ ಹೊತ್ತ ನೌಕರರಿಗೆ ಇಲ್ಲ ಪಾಸ್‌‍ಪೋರ್ಟ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ, ವಿಚಾರಣೆಗೆ ಅನುಮತಿ ನೀಡಲಾಗಿರುವ ಮತ್ತು ಅಮಾನತ್ತಿನಲ್ಲಿರುವ ಸರ್ಕಾರಿ ನೌಕರರಿಗೆ ಇನ್ನು ಮುಂದೆ ಪಾಸ್‌ಪೋರ್ಟ್‌ ಪಡೆಯಲು ಅವಕಾಶವಿಲ್ಲ ಎಂದು ಸಿಬ್ಬಂದಿ ಸಚಿವಾಲಯ ಆದೇಶ ಹೊರಡಿಸಿದೆ.

ಕೇಂದ್ರ ಜಾಗೃತ ದಳ ಮತ್ತು ವಿದೇಶಾಂಗ ಸಚಿವಾಲಯಗಳೊಂದಿಗೆ ಸಮಾಲೋಚನೆ ನಡೆಸಿ, ಸಿಬ್ಬಂದಿ ಸಚಿವಾಲಯದಲ್ಲಿ ಈಗಾಗಲೇ ಇರುವ ಮಾರ್ಗಸೂಚಿಗಳಲ್ಲಿ ಕೆಲವು ಬದಲಾವಣೆ ತರಲಾಗಿದೆ.

ಜಾಗೃತ ದಳ ಒಪ್ಪಿಗೆ ನೀಡಿದ ಬಳಿಕವಷ್ಟೇ ಸರ್ಕಾರಿ ನೌಕರರಿಗೆ ಪಾಸ್‌ಪೋರ್ಟ್‌ ನೀಡಲಾಗುವುದು ಎಂದು ಆದೇಶದಲ್ಲಿ ಹೇಳಲಾಗಿದೆ.

ಕ್ರಿಮಿನಲ್‌ ಪ್ರಕರಣ ಅಥವಾ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ನೌಕರನ ಮೇಲೆ ಯಾವುದೇ ತನಿಖಾ ಸಂಸ್ಥೆಯು ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿದ್ದರೆ ಅಂಥವರಿಗೆ ಪಾಸ್‌ಪೋರ್ಟ್‌ ನೀಡುವುದನ್ನು ಜಾಗೃತ ದಳವು ತಡೆಯಬಹುದಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು