ಶನಿವಾರ, ಜೂನ್ 6, 2020
27 °C

ಆರು ಜನ ಸಿಆರ್‌ಪಿಎಫ್‌ ಸಿಬ್ಬಂದಿಗೆ ಸೋಂಕು, ಸೋಂಕಿತರ ಸಂಖ್ಯೆ 350ಕ್ಕೆ ಏರಿಕೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಗಳಲ್ಲಿ ಇನ್ನೂ ಆರು ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವರದಿಯಾಗಿದ್ದು, ಒಟ್ಟಾರೆ 350 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ.

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಇಂದು 6 ಜನರಿಗೆ ಕೋವಿಡ್-19 ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆಯು 350ಕ್ಕೆ ಏರಿಕೆಯಾಗಿದೆ. ಅಲ್ಲದೆ ಇದುವರೆಗೂ ಇಬ್ಬರು ಮೃತಪಟ್ಟಿದ್ದಾರೆ ಎಂದು ಸಿಆರ್‌ಪಿಎಫ್ ತಿಳಿಸಿದೆ.
ಸದ್ಯ ಸಿಆರ್‌ಪಿಎಫ್‌ನಲ್ಲಿ 129 ಸಕ್ರಿಯ ಪ್ರಕರಣಗಳಿವೆ. 

ಇದನ್ನೂ ಓದಿ: 

ಭಾರತದಲ್ಲಿ ಈವರೆಗೆ ಒಟ್ಟು 1,25,101 ಕೋವಿಡ್-19 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 51,784 ಜನರು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ತಿಳಿಸಿದೆ.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು