ಶುಕ್ರವಾರ, ಡಿಸೆಂಬರ್ 6, 2019
17 °C

ರಾಜಸ್ಥಾನ: 6 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಹತ್ಯೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

representative image

 ಟೋಂಕ್: ರಾಜಸ್ಥಾನ ಟೋಂಕ್ ಜಿಲ್ಲೆಯಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಘಟನೆ ನಡೆದಿದೆ. ಶನಿವಾರ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಭಾನುವಾರ ಪತ್ತೆಯಾಗಿದೆ.

ಪೊಲೀಸರ ಪ್ರಕಾರ 1ನೇ ತರಗತಿಯಲ್ಲಿ ಕಲಿಯುತ್ತಿದ್ದ ಬಾಲಕಿಯ ಮೃತದೇಹ ಅಲೀಗಢದ ಗ್ರಾಮವೊಂದರ ಪೊದೆಯಲ್ಲಿ ಪತ್ತೆಯಾಗಿದೆ. ಮೃತದೇಹ ನೋಡಿ ಅಲ್ಲಿನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಪೈಶಾಚಿಕ ಕೃತ್ಯ ತಡೆಯಲು ಎಲ್ಲರೂ ಕೈಜೋಡಿಸೋಣ

ಪ್ರಾಥಮಿಕ  ತನಿಖೆ ಪ್ರಕಾರ, ಬಾಲಕಿಯನ್ನು ಅತ್ಯಾಚಾರ ಮಾಡಿ ಆಕೆಯ ಶಾಲಾ ಸಮವಸ್ತ್ರದಲ್ಲಿದ್ದ ಬೆಲ್ಟ್‌ನಲ್ಲಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಅಲೀಗಢದ ಪೊಲೀಸ್ ಠಾಣಾ ಅಧಿಕಾರಿ ರಾಮ್ ಕ್ರಿಶನ್ ಹೇಳಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಕೊಡಲಾಗಿದೆ.

ಪ್ರಕರಣದ ತನಿಖೆ ನಡೆಯುತ್ತಿದ್ದು, ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ.

ಇದನ್ನೂ ಓದಿ: ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಹಿಂದಿನ ಭೀಕರತೆ ತೆರೆದಿಟ್ಟ ಪೊಲೀಸ್‌ ದಾಖಲೆ

 ಸರ್ಕಾರಿ ಶಾಲೆಯೊಂದರಲ್ಲಿ 1ನೇ ತರಗತಿ ವಿದ್ಯಾರ್ಥಿನಿ ಈಕೆ. ಶನಿವಾರ ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆದಿದ್ದು, ವಿದ್ಯಾರ್ಥಿನಿ 3 ಗಂಟೆಯವರೆಗೆ  ಶಾಲೆಯಲ್ಲಿದ್ದಳು. ಆನಂತರ ಮನೆಗೆ ತಲುಪಿಲ್ಲ. ವಿಷಯ ತಿಳಿದು ಪೋಷಕರು ಆಕೆಗಾಗಿ ಹುಡುಕಾಟ ನಡೆಸಿದ್ದರೂ  ಸಿಗಲಿಲ್ಲ ಎಂದು ಕ್ರಿಶನ್ ಹೇಳಿದ್ದಾರೆ.

 ಬಾಲಕಿ ಸಂಬಂಧಿಕರ ಮನೆಗೆ ಹೋಗಿರುವ ಸಾಧ್ಯತೆ ಇದೆ ಎಂದು ನಂಬಿ ಪೋಷಕರು ಬಾಲಕಿ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ತಿಳಿಸಿಲ್ಲ. ಬಾಲಕಿಯ ನಾಲ್ಕು ಮಾವಂದಿರು ಅಕ್ಕಪಕ್ಕದ ಮನೆಯಲ್ಲಿ ವಾಸವಾಗಿದ್ದು, ಬಾಲಕಿ ಅವರ ಮನೆಯಲ್ಲಿರಬಹುದು ಎಂದು ನಂಬಿದ ಪೋಷಕರು ಪೊಲೀಸರಿಗೆ ದೂರು ನೀಡಲಿಲ್ಲ ಎಂದು ಎಎಸ್‌ಪಿ ವಿಪಿನ್ ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳಿಗೆ 20 ವರ್ಷ ಕಠಿಣ ಶಿಕ್ಷೆ

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು