ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಮಂದಿರ ಶೀಘ್ರ ನಿರ್ಮಿಸಿ: ಆರ್‌ಎಸ್‌ಎಸ್‌

2025ರಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ
Last Updated 18 ಜನವರಿ 2019, 20:20 IST
ಅಕ್ಷರ ಗಾತ್ರ

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು 2025ರಲ್ಲಿ ನಿರ್ಮಿಸಲಾಗುವುದು ಎಂದು ಆರ್‌ಎಸ್‌ಎಸ್‌ ಪ್ರಧಾನ ಕಾರ್ಯದರ್ಶಿ ಭಯ್ಯಾ ಜಿ ಜೋಶಿ ಹೇಳಿಕೆ ಬಿಜೆಪಿಯನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದೆ.

ವಿವಾದಿತ ಸ್ಥಳದಲ್ಲೇ ರಾಮ ಮಂದಿರ ನಿರ್ಮಾಣವನ್ನು ತಕ್ಷಣವೇ ಕೈಗೊಳ್ಳಬೇಕು ಎಂದು ಆರ್‌ಎಸ್‌ಎಸ್‌ ಪ್ರತಿಪಾದಿಸುತ್ತಿದೆ. ಹೀಗಿರುವಾಗ ಜೋಶಿ ಅವರ ಈ ಹೇಳಿಕೆ ಮಹತ್ವ ಪಡೆದಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರ್‌ಎಸ್‌ಎಸ್‌, ‘ಮಂದಿರ ಶೀಘ್ರ ಆರಂಭಿಸಿ 2025ರ ಒಳಗೆ ಪೂರ್ಣಗೊಳಿಸಬೇಕು ಎಂದು ಜೋಶಿ ಪ್ರತಿಪಾದಿಸಿದ್ದಾರೆ. ಮಂದಿರ ನಿರ್ಮಿಸುವುದು ಆರ್‌ಎಸ್‌ಎಸ್‌ ಆಶಯ. ಆದರೆ, ಈ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕು’ ಎಂದು ತಿಳಿಸಿದೆ.

‘ಇದು ಬಿಜೆಪಿಯ ವೇದಿಕೆ. ಬಿಜೆಪಿಯ ವಕ್ತಾರೆಯಾಗಿ ಆರ್‌ಎಸ್‌ಎಸ್‌ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವುದು ಸಲ್ಲದು’ ಎಂದು ಸಚಿವೆ ಸ್ಮೃತಿ ಇರಾನಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT