ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಮೀಸಲಾತಿ: ನಿರ್ಣಯ ಅಂಗೀಕರಿಸಲು ತೀರ್ಮಾನ

Last Updated 18 ಜನವರಿ 2019, 20:06 IST
ಅಕ್ಷರ ಗಾತ್ರ

ಜೈಪುರ: ಶಾಸನ ಸಭೆಯಲ್ಲಿ ಮಹಿಳೆಯರಿಗೆ ಶೇ33ರಷ್ಟು ವೀಸಲಾತಿ ನೀಡುವ ಸಂಬಂಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡಲಾಗಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಹೇಳಿದರು.

ಕಾಂಗ್ರೆಸ್‌ ಅಧಿಕಾರದಲ್ಲಿರುವ ಐದು ರಾಜ್ಯಗಳ ವಿಧಾನಸಭೆಯಲ್ಲಿ ಈ ರೀತಿ ನಿರ್ಣಯ ಅಂಗೀಕರಿಸಬೇಕು ಎಂಬುದು ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಅವರ ಅಪೇಕ್ಷೆಯಾಗಿದ್ದು ಮಹಿಳಾ ಮೀಸಲಾತಿ ಜಾರಿಗೊಳಿಸಲು ನಮ್ಮ ಪಕ್ಷ ಬಯಸಿದೆ ಎಂದು ಗೆಹ್ಲೋಟ್‌ ಸುದ್ದಿಗಾರರಿಗೆ ತಿಳಿಸಿದರು.

ಶಾಸನ ಸಭೆ ಹಾಗೂ ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಬೇಕೆಂದು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರು ಹೋರಾಟ ಮಾಡಿದ್ದರು. ಅದರ ಫಲವಾಗಿ ಲೋಕಸಭೆಯಲ್ಲಿ ಮಸೂದೆ ಅಂಗೀಕರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT