ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ: ಮಾರ್ಚ್‌ನಲ್ಲಿ ವೇಳಾಪಟ್ಟಿ?

Last Updated 18 ಜನವರಿ 2019, 20:13 IST
ಅಕ್ಷರ ಗಾತ್ರ

ನವದೆಹಲಿ: ಚುನಾವಣಾ ಆಯೋಗವು ಲೋಕಸಭೆ ಚುನಾವಣೆವೇಳಾಪಟ್ಟಿಯನ್ನು ಮಾರ್ಚ್‌ ಮೊದಲನೇ ವಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅವಧಿ ಜೂನ್‌ 3ಕ್ಕೆ ಕೊನೆಗೊಳ್ಳಲಿದೆ. ಅಷ್ಟರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಆಯೋಗವು ಸಿದ್ಧತೆ ಮಾಡಿಕೊಳ್ಳುತ್ತಿದೆ. ಚುನಾವಣೆಯನ್ನು ಎಷ್ಟು ಹಂತಗಳಲ್ಲಿ ನಡೆಸಬೇಕು ಎಂಬ ಬಗ್ಗೆ ಆಯೋಗ ಸಿದ್ಧತೆಯಲ್ಲಿ ತೊಡಗಿದೆ ಎಂದು ಮೂಲಗಳು ಹೇಳಿವೆ.

ಭದ್ರತಾ ಪಡೆಗಳು ಮತ್ತು ಇತರ ಅಗತ್ಯಗಳ ಲಭ್ಯತೆಯನ್ನು ಪರಿಗಣಿಸಿ ಚುನಾವಣೆಯ ವೇಳಾಪಟ್ಟಿ ಅಂತಿಮಗೊಳಿಸುವ ಕೆಲಸವನ್ನು ಚುನಾವಣಾ ಆಯೋಗ ಆರಂಭಿಸಿದೆ. ಲೋಕಸಭೆ ಜೊತೆಗೆ ಅರುಣಾಚಲ ಪ್ರದೇಶ, ಆಂಧ್ರ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ರಾಷ್ಟ್ರಪತಿ ಆಳ್ವಿಕೆ ಇರುವ ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಲೋಕಸಭೆ ಜತೆಗೆ ಚುನಾವಣೆ ನಡೆಯಬಹುದು.

2014ರಲ್ಲಿ ಲೋಕಸಭೆಯ ಮತದಾನವು 9 ಹಂತಗಳಲ್ಲಿ 2014ರ ಏಪ್ರಿಲ್‌ 7ರಿಂದ ಮೇ 12ರ ವರೆಗೆ ನಡೆದಿತ್ತು. ಮತ ಎಣಿಕೆಯು ಮೇ 16ರಂದು ನಡೆದಿತ್ತು.

* ಇವನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT